ದಾವಣಗೆರೆ: ಕಲ್ಲೇಶ್ವರ ಕಾರ್ತಿಕೋತ್ಸವ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಶಿವನ ಫ್ಲೆಕ್ಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದಿದೆ.
ಇಲ್ಲಿನ ಸಾಸ್ವೆಹಳ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಲ್ಲೇಶ್ವರ ಕಾರ್ತಿಕೋತ್ಸವ ಹಿನ್ನೆಲೆಯಲ್ಲಿ ಗ್ರಾಮದ ಹಲವೆಡೆ ಫ್ಲೆಕ್ಸ್ ಅಳವಡಿಸಲಾಗಿತ್ತು. ಮಹಾದ್ವಾರದ ಬಳಿ ಅಳವಡಿಸಿದ್ದ ಶಿವನ ಫ್ಲೆಕ್ಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಫ್ಲೆಕ್ಸ್ ಗೆ ಬೆಂಕಿ ಹಚ್ಚಿದ ಆರೋಪಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಮಾಜಿ ಸಚಿವ ರೇಣುಕಾಚಾರ್ಯ ಭೇಟಿ ನೀಡಿದ್ದು, ಘಟನೆ ಖಂಡಿಸಿದ್ದಾರೆ. ಕಿಡಿಗೇಡಿಗಳ ಕೃತ್ಯದಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗಿದೆ. ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
