ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸAಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಆನ್ ಲೈನ್ ಸೇವಾಸಿಂಧು ಪೋರ್ಟಲ್ ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ. 08392 – 275182 ಗೆ ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಕೆಯ ವಿಧಾನ ಕುರಿತು ಕಾರ್ಯಾಗಾರ
ಅರ್ಜಿಗಳನ್ನು ಆನ್ ಲೈನ್ ಸೇವಾ ಸಿಂಧು ಪೋರ್ಟಲ್ ನಲ್ಲಿ ಸಮರ್ಪಕವಾಗಿ ಸಲ್ಲಿಸುವ ಕುರಿತು ಡಿ.10 ರಂದು ಸಂಜೆ 04 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣದಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ.ಜಿಲ್ಲೆಯ ಆಸಕ್ತ ಸಾಹಿತ್ಯಕ, ಸಾಂಸ್ಕೃತಿಕ ಕಲಾ ಸಂಘ – ಸಂಸ್ಥೆಗಳು, ಕಲಾವಿದರು, ಚಿತ್ರ ಮತ್ತು ಶಿಲ್ಪ ಕಲಾವಿದರು ಭಾಗವಹಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read