ಬೆಂಗಳೂರು: 2023, 2024 ಮತ್ತು 2025ರ ಕೆ-ಸೆಟ್ ಅರ್ಹತಾ ಪಟ್ಟಿಯಲ್ಲಿ ಹೆಸರು ಇರುವ ಅನೇಕರು ನಾನಾ ಕಾರಾಣಗಳಿಂದ ದಾಖಲೆ ಪರಿಶೀಲನೆಗೆ ಹಾಜರಾಗಿರುವುದಿಲ್ಲ.
ಅಂತಹವರ ಅನುಕೂಲಕ್ಕೆ ಡಿ.10ರಿಂದ 12ರವರೆಗೆ ದಾಖಲೆ ಪರಿಶೀಲನೆ ಮತ್ತು ಪ್ರಮಾಣ ಪತ್ರ ನೀಡುವ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಆ ಪ್ರಕಾರ ಮೂಲ ದಾಖಲೆಗಳ ಸಮೇತ ಬಂದು ಪರಿಶೀಲನೆ ಮಾಡಿಸಿಕೊಳ್ಳಬೇಕು. ಎಲ್ಲವೂ ಸರಿ ಇದ್ದರೆ ಸ್ಥಳದಲ್ಲೇ ಪ್ರಮಾಣ ಪತ್ರ ನೀಡಲಾಗುತ್ತದೆ.
ಹೆಚ್ಚಿನ ವಿವರಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವೆಬ್ ಸೈಟ್ ನೋಡಿ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
#KSET: 2023, 2024 ಮತ್ತು 2025ರ ಕೆ-ಸೆಟ್ ಅರ್ಹತಾ ಪಟ್ಟಿಯಲ್ಲಿ ಹೆಸರು ಇರುವ ಅನೇಕರು ನಾನಾ ಕಾರಾಣಗಳಿಂದ ದಾಖಲೆ ಪರಿಶೀಲನೆಗೆ ಹಾಜರಾಗಿರುವುದಿಲ್ಲ. ಅಂತಹವರ ಅನುಕೂಲಕ್ಕೆ ಡಿ.10ರಿಂದ 12ರವರೆಗೆ ದಾಖಲೆ ಪರಿಶೀಲನೆ ಮತ್ತು ಪ್ರಮಾಣ ಪತ್ರ ನೀಡುವ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಆ ಪ್ರಕಾರ ಮೂಲ ದಾಖಲೆಗಳ ಸಮೇತ ಬಂದು ಪರಿಶೀಲನೆ…
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) December 6, 2025
