ನವದೆಹಲಿ: ಕರ್ನಾಟಕ ರಾಜಕೀಯ ವಿದ್ಯಮಾನಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.
ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜಕೀಯ ವಿದ್ಯಮಾನಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಆದರೆ, ಅಂತಿಮ ನಿರ್ಧಾರಕ್ಕೆ ಬಂದಿಲ್ಲ, ಮತ್ತೊಮ್ಮೆ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಇಂದು ನಡೆದ ಸಭೆಯಲ್ಲಿ ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಕಾಂಗ್ರೆಸ್ ನಾಯಕರಲ್ಲಿ ಒಗ್ಗಟ್ಟಿದೆ. ಯಾವುದೇ ರೀತಿಯ ಗೊಂದಲಗಳಿಲ್ಲ ಎಂದು ಅವರು ಹೇಳಿದ್ದಾರೆ.
ದೆಹಲಿಯ 10 ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಯ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಭಾಗವಹಿಸಿದ್ದರು.
