HomeLatest Newsಹೈಕೋರ್ಟ್ ಆದೇಶದಂತೆ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ತಾತ್ಕಾಲಿಕ ಫಲಿತಾಂಶ ರದ್ದು, 3ನೇ ಸುತ್ತಿನ ಸೀಟು...

ಹೈಕೋರ್ಟ್ ಆದೇಶದಂತೆ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ತಾತ್ಕಾಲಿಕ ಫಲಿತಾಂಶ ರದ್ದು, 3ನೇ ಸುತ್ತಿನ ಸೀಟು ಹಂಚಿಕೆಯ ಪರಿಷ್ಕೃತ ರಿಸಲ್ಟ್ ಪ್ರಕಟ

ಬೆಂಗಳೂರು: UGNEET-25: ಹೈಕೋರ್ಟ್ ಆದೇಶದ ಪ್ರಕಾರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ನ 3ನೇ ಸುತ್ತಿನ ಸೀಟು ಹಂಚಿಕೆಯ ಪರಿಷ್ಕೃತ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಶನಿವಾರ ಪ್ರಕಟಿಸಿದೆ.

ಅಕ್ಟೋಬರ್‌ 24ರಂದು ಕೆಇಎ ಪ್ರಕಟಿಸಿದ್ದ ತಾತ್ಕಾಲಿಕ ಫಲಿತಾಂಶವನ್ನು ಹೈಕೋರ್ಟ್ ಆದೇಶದಂತೆ ರದ್ದುಪಡಿಸಲಾಗಿದೆ.

ಪರಿಷ್ಕೃತ ತಾತ್ಕಾಲಿಕ ಫಲಿತಾಂಶಕ್ಕೆ ಏನಾದರು ಆಕ್ಷೇಪಣೆಗಳು ಇದ್ದಲ್ಲಿ ಡಿ.7ರಂದು ಮಧ್ಯಾಹ್ನ 3ಗಂಟೆಯೊಳಗೆ ಇ-ಮೇಲ್( [email protected] ) ಮೂಲಕ ಕಳುಹಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿ.8ರಂದು ಬೆಳಿಗ್ಗೆ‌ 11ರ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು‌ ಹಂಚಿಕೆಯಾದವರು ಡಿ.10ರೊಳಗೆ ಶುಲ್ಕ ಪಾವತಿಸಬೇಕು (ಈಗಾಗಲೇ ಪಾವತಿಸಿರುವ ಶುಲ್ಕವನ್ನು ಕಡಿತಗೊಳಿಸುವ ಮೂಲಕ). ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು, ಡಿ.11ರೊಳಗೆ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು.

ಅಭ್ಯರ್ಥಿಗಳು ಈಗಾಗಲೇ ದಾಖಲಿಸಿರುವ ಇಚ್ಚೆ/ಆಯ್ಕೆಗಳನ್ನು ಪರಿಗಣಿಸಿ ಸೀಟು ಹಂಚಿಕೆ ಮಾಡಲಾಗಿದೆ. ಈ ಸುತ್ತಿನಲ್ಲಿ ಸೀಟು ಹಂಚಿಕೆಯಾದವರು ಕಡ್ಡಾಯವಾಗಿ ಸಂಬಂಧಪಟ್ಟ ಕಾಲೇಜಿಗಳಲ್ಲಿ ವರದಿ ಮಾಡಿಕೊಳ್ಳಬೇಕಾಗುತ್ತದೆ.

3ನೇ ಸುತ್ತಿಗೆ ಹೊಸದಾಗಿ ಸೇರ್ಪಡೆಯಾದ 9 ಕಾಲೇಜುಗಳ 443 ಸೀಟುಗಳಿಗೆ ಎಲ್ಲ ಅಭ್ಯರ್ಥಿಗಳನ್ನು ಹಂಚಿಕೆಗೆ ಪರಿಗಣಿಸಲಾಗಿದೆ. 443 ಸೀಟುಗಳನ್ನು ಪಡೆದ ಅಭ್ಯರ್ಥಿಗಳಲ್ಲಿ ಒಟ್ಟು 301 ಅಭ್ಯರ್ಥಿಗಳು, ಈಗಾಗಲೇ ಎಂಬಿಬಿಎಸ್ ಸೀಟನ್ನು ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಪಡೆದವರಾಗಿದ್ದು, ಅವರಿಂದ ತೆರವಾಗುವ 301 ಸೀಟುಗಳಿಗೆ ಕೂಡ ಎಲ್ಲ ಅಭ್ಯರ್ಥಿಗಳನ್ನು ಹಂಚಿಕೆಗೆ ಪರಿಗಣಿಸಲಾಗುತ್ತದೆ.

ಮೂರನೇ ಸುತ್ತಿನ‌ ಆರಂಭದಲ್ಲಿ ಇದ್ದ ಸೀಟು ಹಾಗೂ ಡಿ.5ರವರೆಗೆ ವಿವಿಧ ಕಾರಣಗಳಿಂದ ರದ್ದುಪಡಿಸಿಕೊಂಡಿರುವ ಸೀಟು ಹಾಗೂ ಮೇಲಿನ ಕ್ರಮದ ಸೀಟು ಹಂಚಿಕೆ ನಂತರ ಉಳಿಕೆಯಾಗುವ ಸೀಟುಗಳನ್ನು ನಿಯಮಾನುಸಾರ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular