HomeLatest NewsBIG NEWS: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ರಂಗಪ್ರವೇಶ: ದೆಹಲಿಯಲ್ಲಿ ಮಹತ್ವದ...

BIG NEWS: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ರಂಗಪ್ರವೇಶ: ದೆಹಲಿಯಲ್ಲಿ ಮಹತ್ವದ ಚರ್ಚೆ, ಅಧಿವೇಶನ ಬಳಿಕ ಅಂತಿಮ ನಿರ್ಧಾರ ಸಾಧ್ಯತೆ

ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಚರ್ಚೆಯನ್ನು ಕೈಗೆತ್ತಿ ಕೊಂಡಿದೆ.

ದೆಹಲಿಯಲ್ಲಿ ನಾಯಕತ್ವ ವಿಚಾರವಾಗಿ ಚರ್ಚೆ ಶುರುವಾಗಿದೆ. ಮೊದಲ ಬಾರಿಗೆ ನಾಯಕತ್ವ ಕುರಿತ ಚರ್ಚೆಯಲ್ಲಿ ಪಕ್ಷದ ನಾಯಕಿ ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ. ಇದುವರೆಗೆ ಯಾವ ಮುನ್ಸೂಚನೆ ನೀಡದೆ ಸುಮ್ಮನಿದ್ದ ಹೈಕಮಾಂಡ್ ಇದೀಗ ನಿನ್ನೆ ಮೊದಲ ಬಾರಿ ವಿಷಯ ಚರ್ಚೆಗೆ ಕೈಗೆತ್ತಿಕೊಂಡಿದೆ.

ಸೋನಿಯಾ ಅವರಿಗೆ ಎಲ್ಲಾ ಮಾಹಿತಿಯನ್ನು ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನೀಡಿದ್ದಾರೆ. ಸಿದ್ದರಾಮಯ್ಯ ಮುಂದುವರಿಕೆ ಅಥವಾ ಬದಲಾವಣೆಯ ಕುರಿತಾಗಿ ಹೈಕಮಾಂಡ್ ನಾಯಕರು ಚರ್ಚೆ ನಡೆಸಿದ್ದಾರೆ. ಅದರಿಂದಾಗುವ ಲಾಭ ನಷ್ಟದ ಬಗ್ಗೆಯೂ ಕಾಂಗ್ರೆಸ್ ನಾಯಕರಿಂದ ಪ್ರಾಥಮಿಕ ಚರ್ಚೆ ನಡೆದಿದೆ. ಎರಡು ಕಡೆಯ ಶಾಸಕರ ಭೇಟಿ, ಘೋಷಣೆಗಳ ಬಗ್ಗೆಯೂ ಸೋನಿಯಾ ಗಾಂಧಿಯವರ ಗಮನಕ್ಕೆ ವೇಣುಗೋಪಾಲ್ ತಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬ್ರೇಕ್ ಫಾಸ್ಟ್ ಮೀಟಿಂಗ್ ಮೂಲಕ ಸದ್ಯ ಗೊಂದಲಕ್ಕೆ ಬ್ರೇಕ್ ಹಾಕಲಾಗಿದೆ. ಗೊಂದಲಕ್ಕೆ ಬ್ರೇಕ್ ಹಾಕಿರುವುದನ್ನು ಮಲ್ಲಿಕಾರ್ಜುನ ಖರ್ಗೆಯವರು ಸೋನಿಯಾ ಗಾಂಧಿಯವರ ಗಮನಕ್ಕೆ ತಂದಿದ್ದಾರೆ. ಸಂಸತ್ ಅಧಿವೇಶನದ ನಂತರ ಮತ್ತೊಮ್ಮೆ ಈ ಕುರಿತಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಯಾವುದೇ ಅಂತಿಮ ತೀರ್ಮಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಬಂದಿಲ್ಲ. ನಿನ್ನೆಯ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ನಾಯಕತ್ವ ವಿಚಾರ ಹೈಕಮಾಂಡ್ ಮುಂದೆ ಇದೆ ಎನ್ನುವುದು ಖಚಿತವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular