ಆಸ್ಪತ್ರೆ ಮೆಟ್ಟಿಲು ಹತ್ತುವಾಗಲೇ ಹಠಾತ್ ಹೃದಯಾಘಾತದಿಂದ ಪುರಸಭೆ ಅಧ್ಯಕ್ಷ ನಿಧನ

ದಾವಣಗೆರೆ: ದಾವಣಗೆರೆ ಜಿಲ್ಲೆ ಮಲೆಬೆನ್ನೂರು ಪುರಸಭೆ ಅಧ್ಯಕ್ಷ ಹನುಮಂತಪ್ಪ(47) ಆಸ್ಪತ್ರೆಯ ಮೆಟ್ಟಿಲು ಹತ್ತುತ್ತಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಆರೋಗ್ಯ ಸಮಸ್ಯೆ ಕಾರಣ ಬೈಕ್ ನಲ್ಲಿ ಆಸ್ಪತ್ರೆಗೆ ಬಂದಿದ್ದ ಹನುಮಂತಪ್ಪ ಬೈಕ್ ನಿಂದ ಇಳಿದು ವೈದ್ಯರ ಬಳಿ ಹೋಗಲು ಮೆಟ್ಟಿಲು ಹತ್ತುವಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಹೃದಯಘಾತದಿಂದ ಹನುಮಂತಪ್ಪ ಮೃತಪಟ್ಟಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ.

ಮಲೆಬೆನ್ನೂರು ಪಟ್ಟಣದ ಪುರಸಭೆಯ ಅಧ್ಯಕ್ಷ, 23ನೇ ವಾರ್ಡ್ ಸದಸ್ಯರಾದ ಹನುಮಂತಪ್ಪ ಅವರ ಗೌರವಾರ್ಥ ಪುರಸಭಾ ಸದಸ್ಯರು, ಸಿಬ್ಬಂದಿ ಸಂತಾಪ ಸೂಚನಾ ಸಭೆ ನಡೆಸಿ ಅವರ ಸೇವೆಯನ್ನು ಸ್ಮರಿಸಿದ್ದಾರೆ. ಪುರಸಭೆ ಆವರಣದಲ್ಲಿ ನಡೆದ ಸಂತಾಪ ಸಭೆಯಲ್ಲಿ ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್. ಶ್ರೀನಿವಾಸ್, ಜಿಲ್ಲಾ ಜನತಾದಳ ಅಧ್ಯಕ್ಷ ಬಿ. ಚಿದಾನಂದಪ್ಪ ಇತರರು ಭಾಗವಹಿಸಿದ್ದರು.

ರಾಜನಹಳ್ಳಿ ವಾಲ್ಮೀಕಿ ಮಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಮೃತರ ಅಂತಿಮ ದರ್ಶನ ಬಳಿಕ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read