HomeLatest NewsBREAKING: ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

BREAKING: ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಕೆಂಪನಹಳ್ಳಿ ಗ್ರಾಮದ ನಿವಾಸಿ ರೇವಣ್ಣ (65) ಮೃತ ವ್ಯಕ್ತಿ. ರಾಮನಗರ ತಾಲೂಕಿನ ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಈ ದುರಂತ ಸಂಭವಿಸಿದೆ. ದೇವರ ದರ್ಶನಕ್ಕೆಂದು ಹೋಗುತ್ತಿದ್ದರು. ಈ ವೇಳೆ ಕಾಲು ಜಾರಿ ಬಿದ್ದವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular