ರಾಯ್ಪುರ: ಛತ್ತೀಸ್ ಗಢದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಐವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಜತ್ ಪುರದ ಪತ್ರಟೋಲಿ ಬಳಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಯುವಕರು ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
