ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ತೀವ್ರ ವ್ಯತ್ಯಯವುಂಟಾದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಭಾರತೀಯ ರೈಲ್ವೆ ಇಲಾಖೆ ಹೆಚ್ಚುವರಿ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ.
ಇಂಡಿಗೋ ವಿಮಾನ ಹಾರಾಟದಲ್ಲಿ ಸಮಸ್ಯೆಯಾಗಿರುವುದರಿಂದ ಪ್ರಯಾಣಿಕರು ಪರದಾಡುತ್ತಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ಚೆನ್ನೈ, ಪುಣೆ, ದೆಹಲಿ ಸೇರಿದಂತೆ ವಿವಿಧ ನಗರಗಳಿಗೆ ವಿಶೇಷ ರೈಲುಗಳು ಸಂಚರಿಸುತ್ತಿವೆ.
ನೈರುತ್ಯ ರೈಲ್ವೆ ಇಲಾಖೆ ಕೂಡ ಹೆಚ್ಚುವರಿಯಾಗಿ 8 ವಿಶೇಷ ವ್ಯವಸ್ಥೆಗಳನ್ನು ಮಾಡಿದೆ. ಇನ್ನು ದೇಶಾದ್ಯಂತ ಇಂಡಿಗೋ ವಿಮಾನ ಹಾರಾಟದಲ್ಲಿ ಕಳೆದ ಆರು ದಿನಗಳಿಂದ ವ್ಯತ್ಯಯವಾಗಿದ್ದು, ಭಾರತೀಯ ರೈಲ್ವೆ ಇಲಾಖೆ ಈಗಾಗಲೇ 35 ಎಕ್ಸ್ ಪ್ರೆಸ್ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಿದೆ.
