HomeLatest NewsBIG NEWS: ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಜಾಗೃತಿಗೆ ವಿಂಟೇಜ್ ಕಾರ್ ರ್ಯಾಲಿ ಉದ್ಘಾಟಿಸಿದ ಗೃಹ ಸಚಿವ...

BIG NEWS: ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಜಾಗೃತಿಗೆ ವಿಂಟೇಜ್ ಕಾರ್ ರ್ಯಾಲಿ ಉದ್ಘಾಟಿಸಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಜಾಗೃತಿ ಅಭಿಯಾನ ಕೈಗೊಂಡಿದ್ದು, ವಿಂಟೇಜ್ ಕಾರುಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರು ಸಿಟಿ ಪೊಲೀಸ್‌ ಹಾಗೂ ಫೆಡರೇಷನ್‌ ಆಫ್‌ ಹಿಸ್ಟೋರಿಕ್‌ ವೆಹಿಕಲ್ಸ್‌ ಆಫ್‌ ಇಂಡಿಯಾ (ಎಫ್ಎಚ್ ವಿಐ) ಸಹಯೋಗದಲ್ಲಿ ಪೌಲ್‌ ಜಾನ್‌ ರೆಸಾರ್ಟ್‌ ಮತ್ತು ಹೊಟೇಲ್‌ ಸಂಸ್ಥೆ ಆಯೋಜಿಸಿದ್ದ ಡ್ರಗ್ಸ್‌ ಮುಕ್ತ ಕರ್ನಾಟಕಕ್ಕಾಗಿ ವಿಂಟೇಜ್‌ ಕಾರ್‌ ರ‍್ಯಾಲಿ ಜಾಗೃತಿ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ಮಾತ್ರವಲ್ಲ, ವಿಶ್ವದೆಲ್ಲೆಡೆ ಸಮಾಜ ಮಾದಕ ವ್ಯಸನದ ಜತೆ ಹೋಗುತ್ತಿದೆ. ಮಾದಕ ವಸ್ತುಗಳನ್ನು ಯಾರು ಬೆಂಬಲಿಸುತ್ತಾರೋ ಅವರು ಮನುಷ್ಯರಲ್ಲ, ಜನರ ಜೀವನದ ಜತೆ ಆಟವಾಡುತ್ತಾರೆ. ಅವರ ಭವಿಷ್ಯ, ಆರೋಗ್ಯವನ್ನು ನಾಶ ಮಾಡುತ್ತಾರೆ. ಇದನ್ನು ಮನಗಂಡು ನಮ್ಮ ಸರ್ಕಾರ ಕರ್ನಾಟಕವನ್ನು ಮಾದಕ ವ್ಯಸನ ಮಕ್ತ ರಾಜ್ಯವಾಗಿ ರೂಪಿಸುವ ಬಗ್ಗೆ ಸರ್ಕಾರ ಘೋಷಿಸಿತ್ತು ಎಂದರು. ಘೋಷಣೆಯಾದ ಕೂಡಲೇ ಕರ್ನಾಟಕ ಮಾದಕ ವ್ಯಸನ ಮುಕ್ತವಾಯಿತು ಎಂದು ಅರ್ಥವಲ್ಲ. ಅದರ ವಿರುದ್ಧ ಯುದ್ಧ ಆರಂಭಿಸಿದ್ದೇವೆ. ಸರ್ಕಾರ ಮತ್ತು ಪೊಲೀಸರು ಯುದ್ಧ ಮಾಡುತ್ತಿದ್ದಾರೆ. ಇದರ ಪರಿಣಾಮ ಕಳೆದ ವರ್ಷದಿಂದ 300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಸಾವಿರಾರು ಜನರನ್ನು ಬಂಧಿಸಿದ್ದು, ಕೆಲವರು ಇನ್ನೂ ಜೈಲಿನಲ್ಲಿದ್ದಾರೆ. ವಿದೇಶದಿಂದ ಶಿಕ್ಷಣಕ್ಕಾಗಿ ಬಂದವರೂ ಇಂಥ ದುಷ್ಕೃತ್ಯಗಳಲ್ಲಿ ತೊಡಗುವುದು ದುರದೃಷ್ಟಕರ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡ್ರಗ್ಸ್ ದಂಧೆಕೋರರು ಎಷ್ಟು ಕೀಳು ಮಟ್ಟಕ್ಕೆ ಇಳಿದ್ದಾರೆ ಎಂದರೆ, ಶಾಲೆಗೆ ತೆರಳಿ ಚಾಕೋಲೇಟ್ ಮೂಲಕ ಮಕ್ಕಳಿಗೆ ಉಚಿತವಾಗಿ ಡ್ರಗ್ಸ್ ಹಂಚುತ್ತಿದ್ದಾರೆ. ಮಕ್ಕಳು ಅದಕ್ಕೆ ದಾಸರಾಗುವಂತೆ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಮಾದಕ ವಸ್ತುಗಳ ಬಳಕೆಯಿಂದ ದೂರ ಇರಬೇಕು ಎಂದು ವಿದ್ಯಾರ್ಥಿ, ಐಟಿ ಪದವೀಧರರು ಸೇರಿದಂತೆ ಯುವ ಸಮುದಾಯಕ್ಕೆ ಕರೆ ಕೊಟ್ಟರು.

ಈ ವೇಳೆ ವಿಧಾನಸೌಧದ ಮುಭಾಗದಿಂದ ಹೊಟ ವಿಂಟೇಜ್‌ ಕಾರುಗಳ ಈ ಆಕರ್ಷಕ ಮೆರವಣಿಗೆ, ಬಿಗ್‌ ಬನಿಯಾನ್‌ ವೈನ್‌ಯಾರ್ಡ್‌ ಅಂಡ್‌ ರೆಸಾರ್ಟ್‌ ತನಕ ಸಾಗಿತು.

For Latest News Updates, Join Our Whatsapp Community🚩
RELATED ARTICLES

Most Popular