HomeLatest NewsBREAKING: ಹಾಲಿನ ಟ್ಯಾಂಕರ್ ಗೆ ಹಿಂಬದಿಯಿಂದ ಡಿಕ್ಕಿಯಾದ ರಭಸಕ್ಕೆ ಕಾರ್ ಗೆ ಬೆಂಕಿ: ಅದೃಷ್ಟವಶಾತ್ ಕಾರ್...

BREAKING: ಹಾಲಿನ ಟ್ಯಾಂಕರ್ ಗೆ ಹಿಂಬದಿಯಿಂದ ಡಿಕ್ಕಿಯಾದ ರಭಸಕ್ಕೆ ಕಾರ್ ಗೆ ಬೆಂಕಿ: ಅದೃಷ್ಟವಶಾತ್ ಕಾರ್ ನಲ್ಲಿದ್ದವರು ಅಪಾಯದಿಂದ ಪಾರು

ರಾಮನಗರ: ಹಾಲಿನ ಟ್ಯಾಂಕರ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿದೆ. ಟ್ಯಾಂಕರ್ ಗೆ ಡಿಕ್ಕಿ ಆದ ರಭಸಕ್ಕೆ ಕಾರ್ ಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ.

ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಗ್ರಾಮ ಸಂಗಬಸವನದೊಡ್ಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅಪಘಾತ ಉಂಟಾಗಿದೆ. ಅದೃಷ್ಟವಶಾತ್ ಕಾರ್ ನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ರಾಮನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular