HomeLatest NewsBREAKING: ದಂಪತಿ, ಮಕ್ಕಳು ತೆರಳುತ್ತಿದ್ದ ಬೈಕ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ಬಾಲಕಿ ಸ್ಥಳದಲ್ಲೇ ಸಾವು,...

BREAKING: ದಂಪತಿ, ಮಕ್ಕಳು ತೆರಳುತ್ತಿದ್ದ ಬೈಕ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ಬಾಲಕಿ ಸ್ಥಳದಲ್ಲೇ ಸಾವು, ಮೂವರು ಗಂಭೀರ

ಚಿಕ್ಕಮಗಳೂರು: ದಂಪತಿ ಮಕ್ಕಳು ತೆರಳುತ್ತಿದ್ದ ಬೈಕ್ ಗೆ ಕಾರ್ ಡಿಕ್ಕಿಯಾಗಿ ಓರ್ವ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಟ್ಟೆ ತಿಮ್ಮನಹಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆರು ವರ್ಷದ ಲಹರಿ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ.

ಪುನೀತ್(37), ಪತ್ನಿ ಚೈತ್ರಾ(34), ಸಿರಿ(8) ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular