HomeLatest Newsನಿಮ್ಮ ಹಳೆಯ ಬ್ಯಾಂಕ್ ಖಾತೆಯಲ್ಲಿನ ಹಣ ಮರೆತಿರುವಿರಾ..? ಮರಳಿ ಪಡೆಯಲು ಇಲ್ಲಿದೆ ಅವಕಾಶ

ನಿಮ್ಮ ಹಳೆಯ ಬ್ಯಾಂಕ್ ಖಾತೆಯಲ್ಲಿನ ಹಣ ಮರೆತಿರುವಿರಾ..? ಮರಳಿ ಪಡೆಯಲು ಇಲ್ಲಿದೆ ಅವಕಾಶ

ದೀರ್ಘಕಾಲದವರೆಗೆ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳು ಮತ್ತು ಷೇರುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರವು ಡಿ.09 ರಂದು ಮ.03 ಗಂಟೆಯಿಂದ ಹಾಸನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ.

ಈ ಶಿಬಿರವು ಭಾರತದ ಹಣಕಾಸು ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಬ್ಯಾಂಕಿಂಗ್, ವಿಮೆ ಮತ್ತು ಇತರ ವಲಯಕ್ಕೆ ಸಂಬಂಧಿಸಿದ ಕಚೇರಿ ಶಾಖೆಗಳಲ್ಲಿ 1 ಅಕ್ಟೋಬರ್ 2025 ರಿಂದ ಪ್ರಾರಂಭವಾಗಿ 31 2025 ರವರೆಗೆ ಮುಂದುವರಿಯುತ್ತದೆ.

ಈ ಶಿಬಿರದಲ್ಲಿ, ಖಾತೆದಾರರು ಅಥವಾ ಕಾನೂನುಬದ್ಧ ವಾರಸುದಾರರು ಬ್ಯಾಂಕಿನಲ್ಲಿ ಸತತ 10 ವರ್ಷಗಳಿಗೂ ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಖಾತೆಗಳಲ್ಲಿನ ಹಣ ಮತ್ತು ಕ್ಲೈಮ್ ಮಾಡದ ಠೇವಣಿಗಳನ್ನು ಕ್ಲೈ ಮಾಡಬಹುದು. ಬ್ಯಾಂಕಿಂಗ್ ವಲಯ, ವಿಮಾ ವಲಯ, ಹಣಕಾಸು ವಲಯ ಮತ್ತು ಇತರ ವಲಯಗಳ ಅಧಿಕಾರಿಗಳು ಶಿಬಿರದಲ್ಲಿ ಭಾಗವಹಿಸಿ ಸಲಹೆ ನೀಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸೂಕ್ತ ಗುರುತಿನ ದಾಖಲೆಗಳು ಮತ್ತು ಪುರಾವೆಗಳೊಂದಿಗೆ ಶಿಬಿರದಲ್ಲಿ ಭಾಗವಹಿಸುವ ಮೂಲಕ, ನೀವು ಅಗತ್ಯ ಸಲಹೆಯನ್ನು ಪಡೆಯಬಹುದು ಮತ್ತು ಹಕ್ಕು ಪಡೆಯದ ಮೊತ್ತವನ್ನು ಮರುಪಡೆಯಲು ಈ ಶಿಬಿರವನ್ನು ಬಳಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.

ಖಾತೆದಾರರು ಅಥವಾ ಕಾನೂನುಬದ್ಧ ವಾರಸುದಾರರು ಈ ಶಿಬಿರ ಮುಗಿದ ನಂತರವೂ ಸಹ ಸಂಬಂಧಪಟ್ಟ ಬ್ಯಾಂಕ್ ಅಥವಾ ಇತರ ಇಲಾಖೆಗಳಲ್ಲಿ ನಿಷ್ಕ್ರಿಯವಾಗಿರುವ ಖಾತೆಗಳಲ್ಲಿನ ಹಣ ಮತ್ತು ಕ್ಲೆöÊಮ್ ಮಾಡದ ಠೇವಣಿಗಳನ್ನು ಕ್ಲೈಮ್ ಮಾಡಬಹುದು.

ಬ್ಯಾಂಕಿನಲ್ಲಿ 10 ವರ್ಷಗಳಿಗೂ ಹೆಚ್ಚು ಕಾಲ ನಿಷ್ಕ್ರಿಯವಾಗಿರುವ ಮತ್ತು ಕ್ಲೈಮ್ ಮಾಡದ ಖಾತೆಗಳು ಮತ್ತು ಠೇವಣಿಗಳ ವಿವರಗಳನ್ನು ನೀವು ಆರ್.ಬಿ.ಐ ನ ಯುಡಿಜಿಎಎಂ( ( https://udgam.rbi.org.in ) ನಲ್ಲಿ ಕಂಡು ಹಿಡಿಯಬಹುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular