HomeLatest Newsಗೋವಾ ಭೀಕರ ಅಗ್ನಿ ದುರಂತದಲ್ಲಿ 25 ಮಂದಿ ಸಾವು: ಕನ್ನಡಿಗನೂ ಬಲಿ

ಗೋವಾ ಭೀಕರ ಅಗ್ನಿ ದುರಂತದಲ್ಲಿ 25 ಮಂದಿ ಸಾವು: ಕನ್ನಡಿಗನೂ ಬಲಿ

ಬೆಂಗಳೂರು: ಗೋವಾದಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ 25 ಮಂದಿ ಸಜೀವ ದಹನವಾಗಿದ್ದಾರೆ. ಇವರಲ್ಲಿ ಕರ್ನಾಟಕದ ಓರ್ವ ವ್ಯಕ್ತಿ ಕೂಡ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ಥಣಿಸಂದ್ರದ ಹೆಗಡೆ ನಗರ ನಿವಾಸಿ ಇಶಾಕ್(25) ಮೃತಪಟ್ಟವರು. ಸ್ನೇಹಿತರೊಂದಿಗೆ ಗೋವಾ ಪ್ರವಾಸಕ್ಕೆ ತೆರಳಿದ್ದ ಇಶಾಕ್ ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದಾರೆ. ಪಬ್ ನಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಇಶಾಕ್ ಮತ್ತು ಸ್ನೇಹಿತರು ಹೊರಗೆ ಬಂದಿದ್ದಾರೆ. ಆದರೆ ಮರೆತುಬಂದಿದ್ದ ಮೊಬೈಲ್ ತರಲು ಒಳಗೆ ಹೋಗಿದ್ದ ಇಶಾಕ್ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular