HomeLatest NewsBREAKING: ಪ್ರಿ ವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗಲೇ ಅಪಘಾತ: ಭಾವಿ ದಂಪತಿ ಸಾವು

BREAKING: ಪ್ರಿ ವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗಲೇ ಅಪಘಾತ: ಭಾವಿ ದಂಪತಿ ಸಾವು

ಕೊಪ್ಪಳ: ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬರುವಾಗ ಸಂಭವಿಸಿದ ಅಪಘಾತದಲ್ಲಿ ಭಾವಿ ದಂಪತಿ ಮೃತಪಟ್ಟಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಚಿಕ್ಕಬಣಕಲ್ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಕೊಪ್ಪಳ ತಾಲೂಕಿನ ಇರಕಲ್ಲಗಢ ಗ್ರಾಮದ ಕರಿಯಪ್ಪ ಮಡಿವಾಳ(26), ಕಾರಟಗಿ ತಾಲೂಕಿನ ಮುಸ್ಟೂರು ಗ್ರಾಮದ ಕವಿತಾ(19) ಮೃತಪಟ್ಟಿದ್ದಾರೆ. ಇವರ ಮದುವೆ ಡಿಸೆಂಬರ್ 21ರಂದು ನಿಗದಿಯಾಗಿತ್ತು.

ಬೈಕ್ ಮತ್ತು ಲಾರಿಯ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರೂ ಮೃತಪಟ್ಟಿದ್ದಾರೆ. ಮದುವೆ ಸಿದ್ಧತೆಯಲ್ಲಿದ್ದ ಇವರು ಪ್ರಿ ವೆಡ್ಡಿಂಗ್ ಶೂಟ್ ಮಾಡಿಸಲು ತೆರಳಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಐದು ತಿಂಗಳ ಹಿಂದೆ ನಿಶ್ಚಿತಾರ್ಥ ನೆರವೇರಿತ್ತು. ಮುನಿರಾಬಾದ್ ಸುತ್ತಮುತ್ತ ಫೋಟೋ ಮತ್ತು ವಿಡಿಯೋ ತೆಗೆಸಿಕೊಂಡು ಸಂಭ್ರಮಿಸಿದ್ದರು. ಮದುವೆ ಪೂರ್ವಭಾವಿಯಾಗಿ ಶೂಟಿಂಗ್ ಮುಗಿಸಿ ಗಂಗಾವತಿ ಮಾರ್ಗವಾಗಿ ಮುಸ್ಟೂರು ಗ್ರಾಮಕ್ಕೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular