ಬೆಂಗಳೂರು: ಶಾಲಾ, ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಪೊಲೀಸ್ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಹೌದು, ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ಸಂಚಾರ ಮತ್ತು ಸುರಕ್ಷತೆಗೆ ಆದ್ಯತೆ ನೀಡುವ ಸಂಬಂಧ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಲಾಗಿದೆ.
ಶಿಕ್ಷಣ ಸಂಸ್ಥೆಗಳು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಂಚಾರ ಹಾಗೂ ಸುರಕ್ಷತೆ ಎಡಿಜಿಪಿ ಆರ್. ಹಿತೇಂದ್ರ ಸುತ್ತೋಲೆಯಲ್ಲಿ ಸೂಚನೆ ನೀಡಿದ್ದಾರೆ.
ಶೈಕ್ಷಣಿಕ ಪ್ರವಾಸದ ವೇಳೆ ಬಸ್ ಗಳ ಸ್ಥಿತಿಗತಿ ಬಗ್ಗೆ ಸಾರಿಗೆ ಇಲಾಖೆಯಿಂದ ಮಾಹಿತಿ ಪಡೆಯಬೇಕು. ಚಾಲಕ ಮಧ್ಯಪಾನಿ ಅಥವಾ ಮಾದಕ ವ್ಯಸನಿಯಲ್ಲ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ಪ್ರವಾಸದ ವೇಳೆ ಒಬ್ಬ ಶಿಕ್ಷಕರು, ಒಬ್ಬ ಗಾರ್ಡ್ ಇರಬೇಕು. ಪ್ರಥಮ ಚಿಕಿತ್ಸೆ ಪೆಟ್ಟಿಗೆ ಇರಬೇಕು. ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.
