ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಬಿ.ಇಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿಗಳನ್ನು ಆನ್ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿ.31 ಕೊನೆಯ ದಿನವಾಗಿದ್ದು, ಸೇವಾಸಿಂಧು ವೆಬ್ಸೈಟ್ https://sevasindhu.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಷರತ್ತುಗಳು: ವಿದ್ಯಾರ್ಥಿಯು ಅಲ್ಪಸಂಖ್ಯಾತರ ಸಮುದಾಯಗಳಿಗೆ ಸೇರಿದವಾಗಿರಬೇಕು. ಅಭ್ಯರ್ಥಿಗಳು ಕರ್ನಾಟಕ ರಾಜ್ಯಕ್ಕೆ ಸೇರಿದವಾಗಿರಬೇಕು. ಕೋರ್ಸ್ಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ ರೂ.25,000/-ಸಾವಿರದಂತೆ ಗರಿಷ್ಟ 2 ವರ್ಷ ಪ್ರೋತ್ಸಾಹಧನ ನೀಡಲಾಗುವುದು. ಅಲ್ಪಸಂಖ್ಯಾತರ ಅಭ್ಯರ್ಥಿಗಳ ಪೋಷಕರ ವಾರ್ಷಿಕ ಗರಿಷ್ಟ ವರಮಾನ ರೂ.6.00 ಲಕ್ಷ ಮಿತಿಯಲ್ಲಿರಬೆಕು. ಅಭ್ಯರ್ಥಿಗಳನ್ನು ಅರ್ಹತೆ ಪರಿಕ್ಷೆ, ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಈ ಪ್ರೋತ್ಸಾಹಧನ ಪಡೆಯುವ ವಿದ್ಯಾರ್ಥಿಗಳು ಭಾರತ ಸರ್ಕಾರ ಆಥವಾ ಇತರೆ ವಿದ್ಯಾರ್ಥಿ ವೇತನ, ಶಿಷ್ಯ ವೇತನ ಪಡೆಯಲು ಅರ್ಹರಿರುತ್ತಾರೆ. ಈ ಸೌಲಭ್ಯ ಪಡೆಯುವ ವಿದ್ಯಾರ್ಥಿಗಳು ಸರ್ಕಾರಿ, ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ನಿಯಮಾನುಸಾರ ಪ್ರವೇಶ ಪಡೆಯಲು ಅರ್ಹರಿರುತ್ತಾರೆ. ವಿದ್ಯಾರ್ಥಿಗಳು ಬಿ.ಇಡಿ ಕೋರ್ಸ್ಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸಿರುವ ಬಗ್ಗೆ ಎಲ್ಲಾ ಅಧಿಕೃತ ದಾಖಲಾತಿಗಳನ್ನು ಸಲ್ಲಿಸಬೇಕು. ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಹರಿರುತ್ತಾರೆ. ಈ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅರ್ಹತೆ ಪರೀಕ್ಷೆ, ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಕನಿಷ್ಟ 50ರಷ್ಟು ಅಂಕಗಳನ್ನು ಪಡೆದಿರಬೇಕು. ಉತ್ತೀರ್ಣರಾಗದ ಅಭ್ಯರ್ಥಿಗಳು ಪ್ರೋತ್ಸಾಹಧನ ಪಡೆಯಲು ಅರ್ಹರಾಗಿರುವುದಿಲ್ಲ. ಮೊದಲನೇ ವರ್ಷದಲ್ಲಿ ಪ್ರೋತ್ಸಾಹಧನ ಪಡೆದಿರುವ ಅಭ್ಯರ್ಥಿಗಳು 2ನೇ ವರ್ಷಕ್ಕೆ ಪ್ರೋತ್ಸಾಹಧನ ಪಡೆಯಲು ಪ್ರತ್ಯೇಕ ಅರ್ಜಿ ಸಲ್ಲಿಸಬೇಕು. ಸುಳ್ಳು ಮಾಹಿತಿ, ದಾಖಲಾತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಿ ಪ್ರೋತ್ಸಾಹ ಧನಪಡೆದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೀಡಲಾಗದ ಪ್ರೋತ್ಸಾಹಧನ ಮೊತ್ತವನ್ನು ವಸೂಲಿ ಮಾಡಿ ಸರ್ಕಾರಕ್ಕೆ ಹಿಂದಿರುಗಿಸಲಾಗುವುದು. ವಿದ್ಯಾರ್ಥಿಯು ತನ್ನ ಬ್ಯಾಂಕ್ ಖಾತೆಯ ಜೊತೆ ಆಧಾರ್ ಸೀಡಿಂಗ್ ಮಾಡುವುದು ಕಡ್ಡಾಯವಾಗಿರುತ್ತದೆ. ವಿದ್ಯಾರ್ಥಿಯು ತನ್ನ ಬ್ಯಾಂಕ್ ಖಾತೆಗೆ Account limit ಸೇಟ್ ಮಾಡಿಕೊಂಡಿದ್ದರೆ, ವಿಸ್ತರಿಸಿಕೊಳ್ಳುವುದು ಅಥವಾ ಅದನ್ನು ತೆರೆವು ಮಾಡಿಕೊಳ್ಳಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.
