ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಹಿನ್ನಡೆಯಾಗಿದೆ.
ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ವಿನಯ್ ಕುಲಕರ್ಣಿಗೆ ಮತ್ತೆ ಜೈಲುವಾಸವೇ ಗತಿಯಾಗಿದೆ.
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಎ16 ಆರೋಪಿಯಾಗಿದ್ದ ಚಂದ್ರಶೇಖರ ಇಂಡಿಗೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.
