HomeLatest Newsಹಣಕ್ಕಾಗಿ ಅನಗತ್ಯ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ದಿನೇಶ್ ಗುಂಡೂರಾವ್

ಹಣಕ್ಕಾಗಿ ಅನಗತ್ಯ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ಉತ್ತರ ನೀಡಿದ್ದಾರೆ.

ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ ಹಾಗೂ ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಈ ಬಗ್ಗೆ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೂರುಗಳು ಬಂದಲ್ಲಿ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆಪಿಎಂಇ ಅಧಿನಿಯಮದ ಸೆಕ್ಷನ್ 15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು.

ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು  ಅನುಸರಿಬೇಕಾದ ನೀತಿ ನಿಯಮಗಳಿದ್ದು ,ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ.ಪಿ.ಎಂ.ಇ, ಅಧಿನಿಯಮದ ಸೆಕ್ಷನ್15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular