HomeLatest Newsರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ :...

ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ : ಸರ್ಕಾರ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉತ್ತರ ನೀಡಿದರು.

ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ ಹಾಗೂ ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಈ ಬಗ್ಗೆ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ.
ದೂರುಗಳು ಬಂದಲ್ಲಿ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆಪಿಎಂಇ ಅಧಿನಿಯಮದ ಸೆಕ್ಷನ್ 15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಅನುಸರಿಬೇಕಾದ ನೀತಿ ನಿಯಮಗಳಿದ್ದು ,ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ.ಪಿ.ಎಂ.ಇ, ಅಧಿನಿಯಮದ ಸೆಕ್ಷನ್15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular