HomeLatest NewsBREAKING: ಚಿಂದಿ ಆಯುವವನ ಮೇಲೆ ಹಲ್ಲೆ: ಪುನೀತ್ ಕೆರೆಹಳ್ಳಿ ವಿರುದ್ಧ FIR ದಾಖಲು

BREAKING: ಚಿಂದಿ ಆಯುವವನ ಮೇಲೆ ಹಲ್ಲೆ: ಪುನೀತ್ ಕೆರೆಹಳ್ಳಿ ವಿರುದ್ಧ FIR ದಾಖಲು

ಬೆಂಗಳೂರು: ಬಾಂಗ್ಲಾ ವಲಸಿಗ ಎಂದು ಚಿಂದಿ ಆಯುವವನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಬಂಧಿಸಿದಂತೆ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬೆಂಗಳೂರಿನ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಹಲ್ಲೆಗೊಳಗಾದ ವ್ಯಕ್ತಿ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಡಿಸೆಂಬರ್ ೩ರಂದು ರಾತ್ರಿ ಚಿಂದಿ ಆಯುತ್ತಿದ್ದ ಜಹಂಗೀರ್ ಆಲಂ ಎಂಬಾತನ ಮೇಲೆ ಬಾಂಗ್ಲಾ ನುಸುಳುಕೋರ ಎಂದು ಪುನೀತ್ ಕೆರೆಹಳ್ಳಿ ಹಾಗೂ ಸಹಚರರು ಕತ್ತಿನಪಟ್ಟಿ ಹಿಡಿದು ಹಲ್ಲೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಹಲ್ಲೆಗೊಳಗಾದ ಜಹಂಗೀರ್ ದೂರು ನೀಡಿದ್ದರು. ಈ ನಿಟ್ಟಿನಲ್ಲಿ ಪುನೀತ್ ಕೆರೆಹಳ್ಳಿರ ವಿರುದ್ಧ ಪ್ರಕರಣ ದಾಖಲಾಗಿದ್ದು, ನೋಟಿಸ್ ಜಾರಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular