ಕರಾವಳಿ ಜನತೆಗೆ ಗುಡ್ ನ್ಯೂಸ್: ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆಗೆ ವಿಶೇಷ ಸೇವೆ

ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕರಾವಳಿ ಜಿಲ್ಲೆಗಳು ಭೌಗೋಳಿಕವಾಗಿ ಭಿನ್ನವಾಗಿರುವುದರಿಂದ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಉತ್ತರ ನೀಡಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಒಳಪಡದೇ ಇರುವ ಗ್ರಾಮ ಪಂಚಾಯತಿಯಲ್ಲಿನ ಒಂದು ಎಕರೆ ಒಳಗಿನ ಜಮೀನುಗಳಿಗೆ ಅನುಮೋದನೆ ನೀಡುವ ಪ್ರಕರಣಗಳಿಗೆ ತಾಂತ್ರಿಕ ಅನುಮೋದನೆ ನೀಡಲು ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಹತ್ತಿರದ ಯೋಜನಾ ಪ್ರಾಧಿಕಾರಗಳ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ, ತಾಲ್ಲೂಕು ಪಂಚಾಯತಿ ಕಛೇರಿಯಲ್ಲಿಯೇ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳು ಕಾರ್ಯ ನಿರ್ವಹಿಸಲು ಆದೇಶಿಸಲಾಗಿದೆ.

ಕರಾವಳಿ ಜಿಲ್ಲೆ ಒಳಗೊಂಡಂತೆ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತ ನಿಯಮಗಳನ್ನು ಸಮನ್ವಯಗೊಳಿಸಲು ಮತ್ತು ವಿನ್ಯಾಸ ಅನುಮೋದನೆಯನ್ನು ಪಾರದರ್ಶಕತೆ ಹಾಗೂ ಜನ ಸ್ನೇಹಿಯಾಗಿಸಲು ಅನುಕೂಲವಾಗುವಂತೆ ಸೆಂಟರ್ ಫಾರ್ ಇ ಗವರ್ನೆನ್ಸ್ ವತಿಯಿಂದ ಯೂನಿಫೈಡ್ ಲ್ಯಾಂಡ್ ಮ್ಯಾನೇಜ್ಮೆಂಟ್ ಸಿಸ್ಟಮ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read