HomeJobsSSLC, PUC, ಇತರೆ ಪದವಿ ಮುಗಿಸಿದವರಿಗೆ ಉದ್ಯೋಗಾವಕಾಶ: ಇಲ್ಲಿದೆ ಗುಡ್ ನ್ಯೂಸ್

SSLC, PUC, ಇತರೆ ಪದವಿ ಮುಗಿಸಿದವರಿಗೆ ಉದ್ಯೋಗಾವಕಾಶ: ಇಲ್ಲಿದೆ ಗುಡ್ ನ್ಯೂಸ್

ಡಿಸೆಂಬರ್ 12 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಇತರೆ ಪದವಿ ಮುಗಿಸಿದ ಅಭ್ಯರ್ಥಿಗಳು ಈ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಬಿ.ಇ-ಎಲೆಕ್ಟ್ರಿಕಲ್, ಬಿ.ಇ-ಮೆಕ್ಯಾನಿಕಲ್, ಬಿ.ಇ-ಇ&ಸಿ, ಎಂ.ಎಸಿ-ಮೆತ್‌ಮೆಟಿಕ್ಸ್ ಮುಗಿಸಿದ ಅಭ್ಯರ್ಥಿಗಳು ಭೋಧನಾ ಕ್ಷೇತ್ರದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು, 18 ರಿಂದ 32 ವರ್ಷ ನಿರುದ್ಯೋಗಿ ಪುರಷರು ಮತ್ತು ಮಹಿಳೆಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ(ರೆಜುಮ್) ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular