BIG NEWS: ಅಕ್ರಮವಾಗಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಉಡುಪಿಗೆ ಬಂದಿದ್ದ 10 ಬಾಂಗ್ಲಾ ಪ್ರಜೆಗಳಿಗೆ ಜೈಲು ಶಿಕ್ಷೆ

ಉಡುಪಿ: ಮಲ್ಪೆ ಠಾಣೆ ಪೊಲೀಸರು ಬಂಧಿಸಿದ್ದ 10 ಮಂದಿ ಬಾಂಗ್ಲಾ ಪ್ರಜೆಗಳಿಗೆ ಉಡುಪಿ ಪ್ರಧಾನ ಹಿರಿಯ ಸಿವಿಲ್ ಮತ್ತು ಸಿಜೆಎಂ ನ್ಯಾಯಾಲಯ ಎರಡು ವರ್ಷ ಸಜೆ ಹಾಗೂ ತಲಾ 10 ಸಾವಿರ ರೂಪಾಯಿ ದಂಡ ವಿಧಿಸಿದೆ.

ಇವರು ಭಾರತ ದೇಶದ ಯಾವುದೇ ಅನುಮತಿ, ದಾಖಲೆಗಳನ್ನು ಪಡೆದುಕೊಳ್ಳದೆ ಅಕ್ರಮವಾಗಿ ನಕಲಿ ಆಧಾರ್ ಕಾರ್ಡ್ ಗಳನ್ನು ಸೃಷ್ಟಿಸಿಕೊಂಡು ಬಾಂಗ್ಲಾದೇಶದಿಂದ ಬಂದಿದ್ದರು. ಉಡುಪಿ ತಾಲೂಕಿನ ಪಡುತೋನ್ಸೆ ಹೂಡೆ ಗ್ರಾಮಕ್ಕೆ ಬಂದಿದ್ದರು ಎಂದು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿತ್ತು.

ಬಾಂಗ್ಲಾದೇಶದ ಪ್ರಜೆಗಳಾದ ಹಕೀಮ್ ಅಲಿ, ಇಸ್ಮಾಯಿಲ್, ಕರೀಂ, ಸಲಾಂ, ರಾಜೀಕುಲ್ ಸೇರಿದಂತೆ 10 ಮಂದಿಗೆ ಉಡುಪಿಯ ಪ್ರಧಾನ ಹಿರಿಯ ಸಿವಿಲ್ ಮತ್ತು ಸಿಜೆಎಂ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

2024ರ ಅಕ್ಟೋಬರ್ 11ರಂದು ಸಂಜೆ ಮಲ್ಪೆಯ ವಡಬಾಂಡೇಶ್ವರ ಬಸ್ ನಿಲ್ದಾಣದ ಬಳಿ 7 ಮಂದಿಯನ್ನು ನಂತರ ಪ್ರಕರಣದ ತನಿಖೆ ನಡೆಸಿ ಉಳಿದ ಮೂವರನ್ನು ಪೊಲೀಸರು ಬಂಧಿಸಿದ್ದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read