HomeLatest NewsBREAKING : 'ಇಂಡಿಗೋ' ವಿಮಾನಗಳ ಹಾರಾಟದಲ್ಲಿ ಚೇತರಿಕೆ : ಕೆಂಪೇಗೌಡ ಏರ್ ಪೋರ್ಟ್'ನಲ್ಲಿ ಇಂದು 58...

BREAKING : ‘ಇಂಡಿಗೋ’ ವಿಮಾನಗಳ ಹಾರಾಟದಲ್ಲಿ ಚೇತರಿಕೆ : ಕೆಂಪೇಗೌಡ ಏರ್ ಪೋರ್ಟ್’ನಲ್ಲಿ ಇಂದು 58 ಫ್ಲೈಟ್ ಮಾತ್ರ ಕ್ಯಾನ್ಸಲ್.!

ಬೆಂಗಳೂರು : ಇಂಡಿಗೋ ವಿಮಾನಗಳ ಹಾರಾಟದಲ್ಲಿ ಚೇತರಿಕೆ ಕಂಡು ಬಂದಿದ್ದು, ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಇಂದು 58 ಫ್ಲೈಟ್ ಮಾತ್ರ ಕ್ಯಾನ್ಸಲ್ ಆಗಿದೆ.

ಹೌದು, ನಿನ್ನೆಗೆ ಹೋಲಿಸಿದರೆ ಇಂದು ರದ್ದಾದ ವಿಮಾನಗಳ ಸಂಖ್ಯೆ ಇಳಿಮುಖವಾಗಿದೆ. ನಿನ್ನೆ 120 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿತ್ತು, ಆದರೆ ಇಂದು 58 ವಿಮಾನಗಳ ಹಾರಾಟ ಮಾತ್ರ ಕ್ಯಾನ್ಸಲ್ ಆಗಿದೆ. ಈ ಮೂಲಕ ವಿಮಾನಗಳ ಹಾರಾಟದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ ಎನ್ನಲಾಗಿದೆ.

ಒಂದು ವಾರದಿಂದ ಇಂಡಿಗೋ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯವುಂಟಾದ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಪರದಾಡುವಂತಾಗಿತ್ತು. ಸದ್ಯ ಇಂಡಿಗೋ ವಿಮಾನ ಸಂಚಾರ ಸಹಜ ಸ್ಥಿತಿಯತ್ತ ಮರಳುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಸಂಚಾರ ಕ್ರಮೇಣ ಸಹಜ ಸ್ಥಿತಿಯತ್ತ ಮರಳುತ್ತಿದೆ. ವಿಮಾನ ಹಾರಾಟ ಭಾಗಶಃ ಸುಧಾರಿಸಿದ್ದು ಪ್ರಯಾಣಿಕರು ಕೊಂಚ ನಿರಾಳರಾಗಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular