BREAKING : ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆ : ಈ ನಿಯಮಗಳ ಪಾಲನೆ ಕಡ್ಡಾಯ.!

ಬೆಂಗಳೂರು : ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಈ ನಿಯಮಗಳ ಪಾಲನೆ ಕಡ್ಡಾಯವಾಗಿದೆ. ಹೊಸ ವರ್ಷಾಚರಣೆ ಹಿನ್ನೆಲೆ ಪಬ್, ಬಾರ್, ರೆಸ್ಟೋರೆಂಟ್ ಗಳಿಗೆ ಹೊಸ ವರ್ಷಕ್ಕೆ ಮಾರ್ಗಸೂಚಿಯನ್ನ ಬಿಡುಗಡೆ ಮಾಡಲಾಗಿದೆ.

ಮಾರ್ಗಸೂಚಿ
1) ಪ್ರತಿ ಬಾರ್ & ಪಬ್ ನಲ್ಲಿ ಸಂಭ್ರಮಾಚರಣೆ ನಡೆಯುವ ಜಾಗದಲ್ಲಿ ಸಿಸಿಟಿವಿ ಕಡ್ಡಾಯ
2) ಅನುಮತಿ ಇಲ್ಲದೇ ಸೇವೆ ನೀಡಿದ್ರೆ ಕಾನೂನು ಕ್ರಮ
3) ಪಬ್ & ಬಾರ್ ನಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಗ್ರಾಹಕರನ್ನ ಸೇರಿಸುವಂತಿಲ್ಲ
4) ಮಹಿಳೆಯ ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸಬೇಕು
5) ಫೈರ್ ಅಂಡ್ ಸೇಫ್ಟಿ ಡಿಪಾರ್ಟ್ ಮೆಂಟ್ ಪರ್ಮಿಷನ್ ಇಲ್ಲದಿದ್ರೆ ಅಂತಹ ಬಾರ್, ಪಬ್ ಬಂದ್
6) ವರ್ಷಾಚರಣೆ ವೇಳೆ ಹೆಚ್ಚು ಗ್ರಾಹಕರನ್ನ ಸೇರಿಸಿಕೊಂಡು ಏನಾದರೂ ಅನಾಹುತ ನಡೆದರೆ ಪಬ್ & ಹೋಟೆಲ್ ಮಾಲೀಕರೇ ಹೊಣೆ.

ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಬೆಂಗಳೂರು ನಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವ್ಯಾಪಕ ಕ್ರಮಗಳನ್ನು ಕೈಗೊಂಡಿದೆ.ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ .

ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಬೆಂಗಳೂರು ಪೊಲೀಸರು ನಗರದ ಹೊಸ ವರ್ಷದ ಆಚರಣೆಗೆ ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಿದ್ದಾರೆ. ಹೆಚ್ಚಿನ ಪಾದಚಾರಿ ದಟ್ಟಣೆ ಇರುವ ಪ್ರದೇಶಗಳಲ್ಲಿ ಬಿಗಿ ಭದ್ರತಾ ಕ್ರಮಗಳು ಇರುತ್ತವೆ ಮತ್ತು ಸಂಚಾರ ಹರಿವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read