ಬೆಂಗಳೂರು : ರಾಜ್ಯದ ಕ್ರೀಡಾಪಟುಗಳಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಲವು ಯೋಜನೆ ಸೌಲಭ್ಯಗಳನ್ನ ಜಾರಿಗೆ ತಂದಿದೆ.ಈ ಕುರಿತು ಇಲ್ಲಿದೆ ಮಾಹಿತಿ.
1. ಕ್ರೀಡಾ ವಸತಿ ಶಾಲೆ/ನಿಲಯ:
ರಾಜ್ಯದಾದ್ಯಂತ 32 ಕ್ರೀಡಾ ವಸತಿ ನಿಲಯ ಹಾಗೂ 02 ಕ್ರೀಡಾ ವಸತಿ ಶಾಲೆಗಳಿದ್ದು, ವೈಜ್ಞಾನಿಕ ಕ್ರೀಡಾ ತರಬೇತಿ, ಉಚಿತ ಊಟೋಪಹಾರ, ವಸತಿ ಮತ್ತು ಕ್ರೀಡಾ ಸಮವಸ್ತ್ರ ಒದಗಿಸಲಾಗುತ್ತಿದೆ.
2. ‘ಗುರಿ: ಒಲಿಂಪಿಕ್ ಪದಕ’ ಯೋಜನೆ
ರಾಜ್ಯದ ಅತ್ಯಂತ ಪ್ರತಿಭಾನ್ವಿತ 60 ಕ್ರೀಡಾಪಟುಗಳನ್ನು ಗುರುತಿಸಿ, 2028ರ ಒಲಿಂಪಿಕ್ಸ್ ತಯಾರಿಗೆ ವಾರ್ಷಿಕ ತಲಾ ರೂ.10.00ಲಕ್ಷ ಪ್ರೋತ್ಸಾಹ ಧನ ನೀಡಲಾಗುವುದು.
3) ಕ್ರೀಡಾ ಶ್ರೀ ಸಾಧಕರಿಗೆ ನಗದು ಪುರಸ್ಕಾರ:
ರಾಷ್ಟ್ರೀಯ ಮತ್ತು ಅಂತರ-ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಕೆಳಕಾಣಿಸಿದಂತೆ ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡದ ಸಾಧಕ ಕ್ರೀಡಾಪಟುಗಳಿಗೆ ವಿಶೇಷ ನಗದು ಪುರಸ್ಕಾರ:
ಅಂತಾರಾಷ್ಟ್ರೀಯ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳ ಪದಕ ವಿಜೇತರಿಗೆ ವಿಶೇಷ ನಗದು ಪುರಸ್ಕಾರ ನೀಡಲಾಗುತ್ತಿದೆ.
5. ಕ್ರೀಡಾ ವಿದ್ಯಾರ್ಥಿ ವೇತನ:
ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪದಕ ವಿಜೇತರಾದ ಹಾಗೂ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರೂ 10,000 ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಲಾಗುತ್ತಿದೆ.
6. ಶೈಕ್ಷಣಿಕ ಶುಲ್ಕ ಮರುಪಾವತಿ:
ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದಿಂದ ಪ್ರತಿನಿಧಿಸಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ವಾರ್ಷಿಕ ಗರಿಷ್ಟ ರೂ.50,000/- ವರೆಗೆ ಶೈಕ್ಷಣಿಕ ಶುಲ್ಕ ಮರುಪಾವತಿ ಮಾಡಲಾಗುತ್ತಿದೆ.
7. ಕ್ರೀಡಾ ಪ್ರಶಸ್ತಿಗಳು:
ಏಕಲವ್ಯ ಪ್ರಶಸ್ತಿ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ
ರಾಜ್ಯವನ್ನು ಪ್ರತಿನಿಧಿಸಿ ಸಾಧನೆ ಮಾಡಿದ 15 ಕ್ರೀಡಾಪಟುಗಳಿಗೆ ಪ್ರತಿ ವರ್ಷ ತಲಾ ರೂ.4.00 ಲಕ್ಷ ನಗದು ಪುರಸ್ಕಾರ ಒಳಗೊಂಡ ರಾಜ್ಯದ ಅತ್ಯುನ್ನತ ಕ್ರೀಡಾ ಪ್ರಶಸ್ತಿಯಾದ ಏಕಲವ್ಯ ಪ್ರಶಸ್ತಿ ನೀಡಲಾಗುತ್ತಿದೆ.
ಜೀವಮಾನ ಸಾಧನೆ ಪ್ರಶಸ್ತಿ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ
ಕ್ರೀಡಾಪಟುಗಳಿಗೆ ತರಬೇತಿ ನೀಡಿದ ರಾಜ್ಯದ ತರಬೇತುದಾರರಿಗೆ ತಲಾ ರೂ 3.00 ಲಕ್ಷ ನಗದು ಪುರಸ್ಕಾರ ಒಳಗೊಂಡ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ.
ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ:- ಗ್ರಾಮೀಣ ಮತ್ತು ಪಾರಂಪರಿಕ ಕ್ರೀಡೆಗಳಲ್ಲಿ
ವಿಶೇಷ ಸಾಧನೆ ಮಾಡಿದ ರಾಜ್ಯದ ಗ್ರಾಮೀಣ ಕ್ರೀಡಾಪಟುಗಳಿಗೆ ತಲಾ ರೂ 2.00 ಲಕ್ಷ ನಗದು ಪುರಸ್ಕಾರ ಒಳಗೊಂಡ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ: ಕ್ರೀಡೆಯ ಅಭಿವೃದ್ಧಿಗೆ ಗಣನೀಯ
ಕೊಡುಗೆ ನೀಡಿದ ಖಾಸಗಿ ಸಂಘ-ಸಂಸ್ಥೆಗಳಿಗೆ ಉತ್ತೇಜನ ನೀಡಲು ತಲಾ ರೂ 10.00 ಲಕ್ಷ ನಗದು ಪುರಸ್ಕಾರ ಒಳಗೊಂಡ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುತ್ತಿದೆ.
8. ನಮ್ಮೂರ ಶಾಲೆಗೆ ನಮ್ಮ ಯುವಜನರು:
ಅಧಿಕೃತ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ರೂಪಿಸುವ ಸರ್ಕಾರಿ ಶಾಲೆಗಳನ್ನು ಪ್ರತಿ ಜಿಲ್ಲೆಗೆ ಒಂದರಂತೆ ಗುರುತಿಸಿ ಆಯ್ಕೆಯಾದ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ.1.00ಲಕ್ಷದಂತೆ ಸರ್ಕಾರದಿಂದ ಪ್ರೋತ್ಸಾಹಧನವನ್ನು ನೀಡಲಾಗುವುದು.



