ತುಮಕೂರು : ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ಆರೋಪದ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಶಿಕ್ಷಕ ಆತ್ಮಹತ್ಯೆ ಮಾಡಿಕೊಂಡ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದೆ.
ಕುರಂಕೋಟೆ ಬಳಿ ಶಿಕ್ಷಕ ದೇವರಾಜು ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿಕ್ಷಕ ದೇವರಾಜು ವಿದ್ಯಾರ್ಥಿನಿಯೋರ್ವಳ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿತ್ತು. ಇದರಿಂದ ದೇವರಾಜು ಮನನೊಂದಿದ್ದರು ಎನ್ನಲಾಗಿದೆ. ನಂತರ ಬೇಸತ್ತು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ .ಕುರಂಕೋಟೆ ಗ್ರಾಮದ ಚಿನ್ನೇನಹಳ್ಳಿಯ ಸರ್ಕಾರಿ ಶಾಲೆಯಲ್ಲಿ ದೇವರಾಜು ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಕೊರಟಗೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮತ್ತೊಂದೆಡೆ ಶಿಕ್ಷಕ ದೇವರಾಜು ಪತ್ನಿ ದೂರು ನೀಡಿದ್ದು, ಎಫ್ ಐ ಆರ್ ದಾಖಲಾಗಿದೆ.
