ಬೆಂಗಳೂರು : ರಾಜ್ಯದಲ್ಲಿ ‘ದ್ವೇಷ ಭಾಷಣ’ ಮಾಡಿದ್ರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ .! ಹೌದು, ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ ಮಾಡಲಾಗಿದೆ. ಸಚಿವ ಹೆಚ್.ಕೆ ಪಾಟೀಲ್ ವಿಧಾನಸಭೆಯಲ್ಲಿ ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಮಂಡಿಸಿದ್ದಾರೆ.
ದ್ವೇಷ ಭಾಷಣದ ಮೂಲಕ ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ 5 ಸಾವಿರ ರು. ದಂಡದ ಜತೆಗೆ ಶಿಕ್ಷೆ ವಿಧಿಸಬಹುದು.
ರಾಜ್ಯದಲ್ಲಿ ಕೋಮು, ದ್ವೇಷದ ಭಾಷಣ ಹೆಚ್ಚಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆಇದನ್ನು ತಡೆಯಲು ಕಠಿಣ ಕ್ರಮ ಒಳಗೊಂಡ ಕಾನೂನು ಅಗತ್ಯ ಎಂಬುದು ಸರ್ಕಾರದ ವಾದವಾಗಿದೆ.ಆದ್ದರಿಂದ ಈ ಮಸೂದೆಯನ್ನ ಮಂಡಿಸಲಾಗಿದೆ.
ಕಳೆದ ಜೂನ್ ತಿಂಗಳಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಪ್ರಾಥಮಿಕವಾಗಿ ಕರಡು ವಿಧೇಯಕ ಪ್ರಸ್ತಾಪಿಸಲಾಗಿತ್ತು, ಇಂದು ವಿಧೇಯಕ ಮಂಡನೆಯಾಗಿದೆ.ರಾಜ್ಯದಲ್ಲಿ ಒಂದು ಸಮುದಾಯ, ಜಾತಿ, ಧರ್ಮ ನಿರ್ಧಿಷ್ಟ ಸಮುದಾಯದ ವ್ಯಕ್ತಿಗಳು, ಧಾರ್ಮಿಕ ಮುಖಂಡರು ಸೇರಿದಂತೆ ಮತ್ತಿತರರನ್ನು ಗುರಿಯಾಗಿಟ್ಟುಕೊಂಡು ಕೆಲವು ನಿರ್ಧಿಷ್ಟ ಬಣದವರು ಹಲ್ಲೆ ಮಾಡುವುದು ಜನಾಂಗೀಯ ನಿಂದನೆ, ದ್ವೇಷ ಭಾಷಣ ಮಾಡುವುದು ಸರ್ವೆ ಸಾಮಾನ್ಯವಾಗಿತ್ತು. ಇದನ್ನು ತಡೆಗಟ್ಟಬೇಕೆಂಬ ಬೇಡಿಕೆ ಕೇಳಿಬಂದಿತ್ತು.
ಆದ್ದರಿಂದ ದ್ವೇಷ ಭಾಷಣದ ವಿರುದ್ಧ ಕಾಯಿದೆ ಜಾರಿಗೆ ತರಲು ಸರ್ಕಾರ ನಿರ್ಧರಿಸಿತ್ತು. ಯಾವುದೇ ಭಾಷೆ, ಧರ್ಮ, ಜಾತಿ, ಊರು, ನ್ಯೂನತೆ ಆಧರಿಸಿ ದ್ವೇಷ ಭಾಷಣ ಮಾಡುವುದನ್ನು ನಿರ್ಬಂಧಿಸಲಾಗುತ್ತದೆ. ಧರ್ಮವನ್ನು ಆಧಾರವಾಗಿ ಇಟ್ಟುಕೊಂಡು ಟೀಕೆ ಮಾಡುವವರಿಗೆ ಈ ಕಾಯಿದೆ ಎಚ್ಚರಿಕೆ ನೀಡುತ್ತದೆ. ಈ ಕಾಯಿದೆ ಮೂಲಕ ದ್ವೇಷದ ಭಾಷಣ ಮಾಡುವರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯಿರುತ್ತದೆ.
