ಚಿತ್ರದುರ್ಗ : ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಲೇಔಟ್ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ ಸಮಾಧಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ. ಈ ಸಂಬಂಧ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕೆಲವು ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಅದೇನೆ ಇರಲಿ ತನಿಖೆಯಿಂದಷ್ಟೇ ಸತ್ಯ ಹೊರಬರಬೇಕಿದೆ.
ನಟ ದರ್ಶನ್ & ಗ್ಯಾಂಗ್ ನಿಂದ ಕೊಲೆಯಾಗಿದ್ದಾನೆ ಎನ್ನಲಾದ ರೇಣುಕಾಸ್ವಾಮಿ ಸಮಾಧಿ ಚಿತ್ರದುರ್ಗದಲ್ಲಿದೆ. ಯಾವ ಕಾರಣಕ್ಕೆ..? ಹೇಗೆ ಘಟನೆ ನಡೆಯಿತು ಎಂಬುದು ತಿಳಿದು ಬಂದಿಲ್ಲ. ರುದ್ರಭೂಮಿ ಬಳಿ ಲೇಔಟ್ ನಿರ್ಮಾಣ ಮಾಡುವ ವೇಳೆ ಸಮಾಧಿಗೆ ಹಾನಿಯಾಗಿದೆ ಎಂದು ಶಂಕಿಸಲಾಗಿದೆ.
