HomeLatest NewsBIG NEWS: ರಾಜ್ಯದಲ್ಲಿ ಕೃಷಿ ಜಮೀನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆ ಸರಳೀಕರಣ: ಸಚಿವ ಕೃಷ್ಣ...

BIG NEWS: ರಾಜ್ಯದಲ್ಲಿ ಕೃಷಿ ಜಮೀನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆ ಸರಳೀಕರಣ: ಸಚಿವ ಕೃಷ್ಣ ಬೈರೇಗೌಡ

ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಕ್ರಮಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ರಾಮೋಜಿ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಉತ್ತರ ನೀಡಿದ್ದಾರೆ.

ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು.

ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 2 ಎಕರೆವರೆಗೆ ಭೂ ಪರಿವರ್ತನೆಯ ಅವಶ್ಯಕತೆ ಇಲ್ಲದೆ ನೇರವಾಗಿ ಪ್ಲಾನ್ ಅಪ್ರೂವ್ ಮಾಡಿಸಿಕೊಳ್ಳಬಹುದಾಗಿದೆ ಹಾಗೂ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪರಿವರ್ತನೆ ಅಗತ್ಯವಿಲ್ಲ ಮತ್ತು ಕಂದಾಯ ನ್ಯಾಯಾಲಯ ನಡೆಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular