HomeLatest Newsವಸತಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 4 ಲಕ್ಷ ರೂ.ವರೆಗೆ ಸಹಾಯಧನ ನೀಡಲು ಸರ್ಕಾರ ಚಿಂತನೆ

ವಸತಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 4 ಲಕ್ಷ ರೂ.ವರೆಗೆ ಸಹಾಯಧನ ನೀಡಲು ಸರ್ಕಾರ ಚಿಂತನೆ

ಬೆಳಗಾವಿ: ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ ಸಹಾಯಧನವು ಸಾಕಾಗುತ್ತಿಲ್ಲ ಎಂಬ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗಾದರೂ ಸಹಾಯಧನ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಅವರ ಉತ್ತರ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಮಾಡಲು ಬೇಕಾಗುವ ಕಚ್ಚಾ ವಸ್ತುಗಳ ಬೆಲೆ ದುಬಾರಿಯಾಗಿದ್ದು, ಆದ್ದರಿಂದ ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳಿಗೆ ಈಗ ನೀಡಲಾಗುತ್ತಿರುವ ಸಹಾಯಧನ ಹೆಚ್ಚಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ. ಈ ಸಹಾಯಧನ ಹೆಚ್ಚಳ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಈ ಬಗ್ಗೆ ಬರುವ ಬಜೆಟ್‍ನಲ್ಲಿ ಪರಿಗಣಿಸುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತುತ ಕೇಂದ್ರ ಸರ್ಕಾರದ ವಸತಿ ಯೋಜನೆಗಳನ್ನು ಹೊರತುಪಡಿಸಿ ಉಳಿದ ಯಾವುದೇ ವಸತಿ ಯೋಜನೆಗಳಡಿ ಅನುದಾನ ಬಿಡುಗಡೆ ಮಾಡಲು ಬಾಕಿ ಇರುವುದಿಲ್ಲ. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ವಿವಿಧ ವಸತಿ ಯೋಜನೆಗಳಡಿ ಅಕ್ಟೋಬರ್-2025ರ ಅಂತ್ಯಕ್ಕೆ 1324.26 ರೂ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ಬಿಡುಗಡೆ  ಮಾಡಲಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular