HomeJobs25,487 ಕಾನ್ಸ್​ ಟೇಬಲ್​ ಹುದ್ದೆಗಳಿಗೆ ನೇಮಕಾತಿ: ಹೀಗಿದೆ ವಿದ್ಯಾರ್ಹತೆ ಸೇರಿ ಇನ್ನಿತರ ಮಾಹಿತಿ

25,487 ಕಾನ್ಸ್​ ಟೇಬಲ್​ ಹುದ್ದೆಗಳಿಗೆ ನೇಮಕಾತಿ: ಹೀಗಿದೆ ವಿದ್ಯಾರ್ಹತೆ ಸೇರಿ ಇನ್ನಿತರ ಮಾಹಿತಿ

ಸಿಬ್ಬಂದಿ ನೇಮಕಾತಿ ಆಯೋಗ(SSC) 25,487 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸೇನಾ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಕಾನ್ಸ್​​ಟೇಬಲ್​, ರೈಫಲ್​ಮ್ಯಾನ್​ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳು 25,487 ಇದ್ದು, ಇದರಲ್ಲಿ 23,467 ಹುದ್ದೆಗಳು ಪುರುಷರಿಗೆ ಮೀಸಲಾಗಿದ್ದರೆ, ಮಹಿಳೆಯರಿಗೆ 2020 ಹುದ್ದೆ ಮೀಸಲಾಗಿವೆ.

ಬಿಎಸ್​ಎಫ್ 616, ಸಿಐಎಸ್​ಎಫ್ 14595, ಸಿಆರ್​ಪಿಎಫ್ 5490, ಐಟಿಬಿಪಿ 1293,   AR 1706 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯಾರ್ಹತೆ:

10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಕನಿಷ್ಠ 18, ಜನವರಿ 2025ಕ್ಕೆ ಅನುಗುಣವಾಗಿ 23 ವರ್ಷ ಮೀರಿರಬಾರದು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಹಾಗೂ ನಿವೃತ್ತ ಸೇವಾದಾರ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ:

ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಪ.ಜಾತಿ, ಪ.ಪಂ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಇತರೆ ಅಭ್ಯರ್ಥಿಗಳಿಗೆ 100 ರೂಪಾಯಿ ಶುಲ್ಕ ನಿಗದಪಡಿಸಲಾಗಿದೆ.

ಕಂಪ್ಯೂಟರ್​ ಆಧಾರಿತ ಪರೀಕ್ಷೆ, ದೈಹಿಕ ಗುಣಮಟ್ಟ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದಾಖಲಾತಿ ಪರಿಶೀಲನೆ ನಡೆಯಲಿದೆ. ಈ ಹುದ್ದೆಗೆ ಡಿಸೆಂಬರ್​ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಡಿಸೆಂಬರ್​ 31 ಕಡೆಯ ದಿನವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ssc.gov.in ವೆಬ್ ಸೈಟ್ ಗಮನಿಸಬಹುದಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular