ತುಮಕೂರು : ತುಮಕೂರು ಜಿಲ್ಲೆಯಲ್ಲಿನ ಖಾಲಿ ಇರುವ 117 ಅಂಗನವಾಡಿ ಕಾರ್ಯಕರ್ತೆ ಹಾಗೂ 829 ಅಂಗನವಾಡಿ ಸಹಾಯಕಿಯರ ಗೌರವಧನ ಸೇವಾ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗೆ ದಿನಾಂಕ:
10-12-2025 ರಿಂದ 09-01-2026 (ಸಂಜೆ 5.30 ರವರೆಗೆ)
ಅರ್ಜಿ ಸಲ್ಲಿಸಲು: https://karnemakaone.kar.nic.in/abcd/ ಭೇಟಿ ನೀಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.
ಸೂಚನೆಗಳು:-
- ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್ಲೈನ್ (Online)ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುವುದು.
- ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ನೇಮಕಾತಿಯ ಮಾರ್ಗಸೂಚಿ/ನಿಬಂಧನೆಗಳನ್ನು ಸ್ಪಷ್ಟವಾಗಿ ಓದಿಕೊಂಡು ನೀಡಲಾಗಿರುವ ಸೂಚನೆಯಂತೆ ಅರ್ಜಿಗಳನ್ನು ಭರ್ತಿ ಮಾಡಿ ಅವಶ್ಯಕ ದೃಢಿಕೃತ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸುವುದು ಹಾಗೂ ಡಿಜಿ ಲಾಕರ್ (Dig locker )ಬಳಸಿ ಕೂಡ ಅರ್ಜಿ ಸಲ್ಲಿಸಬಹುದಾಗಿದೆ.
- ಆನ್ಲೈನ್ (Online) ಮೂಲಕವೇ ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದು. ತದನಂತರ ಸಲ್ಲಿಸುವ ದಾಖಲಾತಿಗಳನ್ನು ಪರಿಗಣಿಸಲಾಗುವುದಿಲ್ಲ.



