ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ನಟ ದರ್ಶನ್ ಟೀ ಶರ್ಟ್ ಹಾಕಿಕೊಂಡು ಅಭಿಮಾನಿಗಳು ಥಿಯೇಟರ್ ಎದುರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಬರೋಬ್ಬರಿ 300ಕ್ಕೂ ಅಧಿಕ ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ ಆಗಿದ್ದು, ಎಲ್ಲಡೆ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಬೆಳಗ್ಗೆ 6 ಗಂಟೆಯಿಂದಲೇ ವಿಶೇಷ ಪ್ರದರ್ಶನ ಆರಂಭವಾಗಿದೆ.
ಡೆವಿಲ್ ಚಿತ್ರಕ್ಕೆ ಪ್ರಕಾಶ್ ವೀರ್ ಆ್ಯಕ್ಷನ್ ಕಟ್ ಹೇಳಿದ್ದು, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೆಳಗ್ಗೆಯಿಂದಲೇ ವಿಶೇಷ ಪ್ರದರ್ಶನ ಆರಂಭವಾಗಿದ್ದು, ಎಲ್ಲಾ ಶೋಗಳು ಹೌಸ್ ಫುಲ್ ಆಗಿದೆ.
ದರ್ಶನ್ ಅಭಿಮಾನಿಗಳ ಸಂಭ್ರಮಾಚರಣೆ

