HomeLatest Newsರಾಜ್ಯದ ಜನತೆಗೆ ಮುಖ್ಯ ಮಾಹಿತಿ: ಭೂ ಪರಿವರ್ತನೆ ನಿಯಮ ಸರಳೀಕರಣ: ಕೃಷಿಯೇತರ ಉದ್ದೇಶಗಳಿಗೆ ಭೂಮಿ ಪರಿವರ್ತಿಸುವ...

ರಾಜ್ಯದ ಜನತೆಗೆ ಮುಖ್ಯ ಮಾಹಿತಿ: ಭೂ ಪರಿವರ್ತನೆ ನಿಯಮ ಸರಳೀಕರಣ: ಕೃಷಿಯೇತರ ಉದ್ದೇಶಗಳಿಗೆ ಭೂಮಿ ಪರಿವರ್ತಿಸುವ ಪ್ರಕ್ರಿಯೆ ಇನ್ನಷ್ಟು ಸರಳ

ಬೆಳಗಾವಿ: ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು ಈಗಾಗಲೇ ವಿವಿಧ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ, ಅಭಿಪ್ರಾಯ ಹಾಗೂ ಸಲಹೆಯನ್ನು ಪಡೆದು ಸೂಕ್ತ ನಿಯಮಗಳನ್ನು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ಪ್ರಸ್ತುತ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಲು ಕ್ರಮವಹಿಸಲಾಗುತ್ತಿರುವುದರಿಂದ ಜನತೆಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಿಲ್ಲ. ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ಕ್ಕೆ ಮಾಡಲಾದ ತಿದ್ದುಪಡಿಗಳಿಗೆ ಅನುಗುಣವಾಗಿ ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ವಿವಿಧ ನಿಯಮಗಳಿಗೆ ತಿದ್ದುಪಡಿ ಮಾಡಲು ಸರ್ಕಾರವು ದಿನಾಂಕ: 17.09.2025 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದ್ದು, ಶೀಘ್ರದಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಲಾಗುವುದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಣ್ಣ ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 2 ಎಕರೆವರೆಗೆ ಭೂ ಪರಿವರ್ತನೆಯ ಅವಶ್ಯಕತೆ ಇಲ್ಲದೆ ನೇರವಾಗಿ ಪ್ಲಾನ್ ಅಪ್ರೂವಲ್ ಮಾಡಿಸಿಕೊಳ್ಳಬಹುದಾಗಿದೆ ಹಾಗೂ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಪರಿವರ್ತನೆ ಅಗತ್ಯವಿಲ್ಲ ಮತ್ತು ಕಂದಾಯ ನ್ಯಾಯಾಲಯ ನಡೆಸುವ ಕುರಿತಂತೆ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular