ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ .
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ . ಬೇರೆ ಬೇರೆ ಕಡೆ ಹೊರಡಬೇಕಿದ್ದ 28 ವಿಮಾನಗಳು ಹಾಗೂ ಆಗಮಿಸಬೇಕಿದ್ದ 32 ವಿಮಾನಗಳ ಹಾರಾಟ ರದ್ದಾಗಿದೆ. ಈ ಬಗ್ಗೆ ಪ್ರಯಾಣಿಕರಿಗೆ ಮೊದಲೇ ಏರ್ ಲೈನ್ಸ್ ಸಂದೇಶ ರವಾನಿಸಿದೆ.
ಒಂದು ವಾರದಿಂದ ಇಂಡಿಗೋ ವಿಮಾನ ಹಾರಾಟದಲ್ಲಿ ಭಾರಿ ವ್ಯತ್ಯಯವುಂಟಾದ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಪರದಾಡುವಂತಾಗಿತ್ತು. ಸದ್ಯ ಇಂಡಿಗೋ ವಿಮಾನ ಸಂಚಾರ ಸಹಜ ಸ್ಥಿತಿಯತ್ತ ಮರಳುತ್ತಿದೆ.
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಸಂಚಾರ ಕ್ರಮೇಣ ಸಹಜ ಸ್ಥಿತಿಯತ್ತ ಮರಳುತ್ತಿದೆ. ವಿಮಾನ ಹಾರಾಟ ಭಾಗಶಃ ಸುಧಾರಿಸಿದ್ದು ಪ್ರಯಾಣಿಕರು ಕೊಂಚ ನಿರಾಳರಾಗಿದ್ದಾರೆ.
