ಬೆಳಗಾವಿ: ರಾಜ್ಯ ಕಾಂಗ್ರೆಸ್ ನಲ್ಲಿ ಡಿನ್ನರ್ ಪಾಲಿಟಿಕ್ಸ್ ಮತ್ತೆ ಜೋರಾಗಿದೆ. ಬೆಂಗಳೂರು ಬಳಿಕ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಡಿನ್ನರ್ ಮೀಟಿಂಗ್ ನಡೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕರ ಡಿನ್ನರ್ ಮೀಟಿಂಗ್ ಬಗ್ಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಮಾರ್ಮಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್, ರಾಜ್ಯದಲ್ಲಿ ಈ ಬಾರಿ ಎಲ್ಲ ಕಡೆ ರಾಜಕೀಯ ವಾತಾವರಣ ಚೆನ್ನಾಗಿದೆ ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಚಳಿಯ ವಾತಾವರಣದ ನಡುವೆ ರಾಜಕೀಯ ವಾತಾವರಣವೂ ಚೆನ್ನಾಗಿದೆ. ಇನ್ನು ಬೆಳಗಾವಿ ಪ್ರವಾಸೋದ್ಯಮಕ್ಕೆ ಅನುಕೂಲಕರವಾದ ಪ್ರದೇಶ ಎಂದು ಹೇಳಿದರು.
