HomeLatest NewsBIG NEWS: ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್: 15 ದಿವಸಗಳ ವೇತನ ಹೆಚ್ಚಳಕ್ಕೆ ಪರಿಷ್ಕರಣೆ

BIG NEWS: ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್: 15 ದಿವಸಗಳ ವೇತನ ಹೆಚ್ಚಳಕ್ಕೆ ಪರಿಷ್ಕರಣೆ

ಬೆಳಗಾವಿ: ಪೊಲೀಸ್ ಇಲಾಖೆಯ ಎ.ಎಸ್.ಐ ಮತ್ತು ಸಿಬ್ಬಂದಿಗಳು ಪಿ.ಎಸ್.ಐ ವೃಂದದ ಪತ್ರಾಂಕಿತ ರಜಾ ದಿವಸಗಳಲ್ಲಿ ಕಾರ್ಯನಿರ್ವಹಿಸಿದ್ದಕ್ಕಾಗಿ ಪ್ರಸ್ತುತ ಲಭ್ಯವಿರುವ 15 ದಿವಸಗಳ ವೇತನವನ್ನು 30 ದಿವಸಗಳ ವೇತನಕ್ಕೆ ಪರಿಷ್ಕರಿಸುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆ ಸದಸ್ಯರಾದ ಡಿ.ಟಿ.ಶ್ರೀನಿವಾಸ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಸ್ತುತ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಕೆಲವು ನಿರ್ದಿಷ್ಟ ವೃಂದದ ಸಿಬ್ಬಂದಿಗಳನ್ನೂ ಒಳಗೊಂಡಂತೆ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್-ಟೇಬಲ್ ಮತ್ತು ಹೆಡ್ ಕಾನ್ಸ್-ಟೇಬಲ್ ವೃಂದದ ಸಿಬ್ಬಂದಿಗಳಿಗೆ ಅವರು ಪತ್ರಾಂಕಿತ ರಜಾ ದಿವಸಗಳಲ್ಲಿ ಕಾರ್ಯನಿರ್ವಹಿಸಿದ್ದಕ್ಕಾಗಿ 30 ದಿನಗಳ ಹೆಚ್ಚುವರಿ ವೇತನವನ್ನು ಪಾವತಿಸಲು ಅವಕಾಶವಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಲಭ್ಯವಿರುವ ಪತ್ರಾಂಕಿತ ರಜಾ ವೇತನದ ಸೌಲಭ್ಯವೂ ಸೇರಿದಂತೆ ಸರ್ಕಾರಿ ನೌಕರರ ವಿಶೇಷ ಭತ್ಯೆಯ ಪರಿಷ್ಕರಣೆಯು ಸರ್ಕಾರದ ನೀತಿ ನಿರ್ಣಯಕ್ಕೆ ಸಂಬಂಧಿಸಿರುತ್ತದೆ ಎಂದು ಗೃಹ ಸಚಿವರು ವಿವರಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular