HomeLatest Newsಎಲ್ಲಾ ವರ್ಗದ ರೈತರಿಗೆ ರೈತರಿಗೆ ಗುಡ್ ನ್ಯೂಸ್: ಕೃಷಿ ಭಾಗ್ಯ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ

ಎಲ್ಲಾ ವರ್ಗದ ರೈತರಿಗೆ ರೈತರಿಗೆ ಗುಡ್ ನ್ಯೂಸ್: ಕೃಷಿ ಭಾಗ್ಯ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ

ಮಳೆಯಾಶ್ರಿತ ಕೃಷಿಯನ್ನು ಜೀವನಾಧಾರಿತ ಕೃಷಿಯಿಂದ ಸುಸ್ಥಿರ ಕೃಷಿಯನ್ನಾಗಿ ರೈತರ ಜೀವನಮಟ್ಟವನ್ನು ಉತ್ತಮಪಡಿಸಲು ಕೃಷಿ ಭಾಗ್ಯ ಮತ್ತು ಕೃಷಿ ಭಾಗ್ಯ ಎಸ್‍ಡಿಎಂಫ್ ಈ ಯೋಜನೆಯನ್ನು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಧಾರವಾಡ ಜಿಲ್ಲೆಗೆ ಪ್ರಸ್ತುತ ಸಾಲಿಗೆ ಈ ಕಾರ್ಯಕ್ರಮ ನಿಗದಿಯಾಗಿರುತ್ತದೆ. ಕೃಷಿ ಭಾಗ್ಯ ಯೋಜನೆಯಡಿ ಒಟ್ಟಾರೆ 6 ಕಡ್ಡಾಯ ಘಟಕಗಳನ್ನು ಒಳಗೊಂಡಿದ್ದು, ಎಲ್ಲಾ ಘಟಕಗಳನ್ನು ರೈತ ಫಲಾನುಭವಿಗಳು ಯೋಜನೆಯ ಸಮಗ್ರ ಸದುಪಯೋಗ ಪಡೆಯಲು ತಪ್ಪದೇ ಅಳವಡಿಕೆ ಮಾಡಬೇಕಾಗುತ್ತದೆ.

ಕೃಷಿ ಭಾಗ್ಯ ಯೋಜನೆಗಳು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಕ್ಷೇತ್ರ ಬದು ನಿರ್ಮಾಣ, ನೀರು ಸಂಗ್ರಹಣಾ ರಚನೆ ನಿರ್ಮಾಣ(ಕೃಷಿಹೊಂಡ),  ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿಬೇಲಿ,  ಹೊಂಡದಿಂದ ನೀರು ಎತ್ತಲು ಡೀಸೆಲ್, ಪೆಟ್ರೋಲ್, ಸೋಲಾರ್  ಪಂಪ್‍ಸೆಟ್, ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು ಹನಿ) ನೀರಾವರಿ.

ಸದರಿ ಯೋಜನೆಯಡಿ ಎಲ್ಲಾ ವರ್ಗದ ರೈತರಿಗೆ ಅನುದಾನ ಲಭ್ಯವಿದ್ದು, ಅರ್ಹ ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಿದ ಕೂಡಲೇ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಆದ್ದರಿಂದ ಯೋಜನೆಯ ಅನುಕೂಲ ಪಡೆದುಕೊಳ್ಳಲು ಇಚ್ಛಿಸುವ ಎಲ್ಲಾ ವರ್ಗದ ಅರ್ಹ ರೈತ ಫಲಾನುಭವಿಗಳು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರಾದ ರಾಜಶೇಖರ ಅನಗೌಡರ, ಧಾರವಾಡ(8277931282), ಮಂಜುಳಾ ತೆಂಬದ, ಹುಬ್ಬಳ್ಳಿ(8277931288),  ಅಮರ ನಾಯ್ಕರ, ಕಲಘಟಗಿ(8277931291), ರೇಖಾ. ಆರ್. ಗಡ್ಡದವರ, ಕುಂದಗೋಳ(9071449976), ರವೀಂದ್ರಗೌಡ ಪಾಟೀಲ, ನವಲಗುಂದ(8277931295) ಸಂಪರ್ಕಿಸಬಹುದು ಎಂದು ಧಾರವಾಡ ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular