HomeLatest Newsಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅಸ್ತು: ಸಂಪುಟ ಸಭೆ ಮಹತ್ವದ...

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅಸ್ತು: ಸಂಪುಟ ಸಭೆ ಮಹತ್ವದ ನಿರ್ಧಾರ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸಲು ಸುವರ್ಣಸೌಧದ ಸಂಪುಟ ಸಭಾ ಮಂದಿರದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಡಿಸಲು ಗ್ರೀನ್ ಸಿಗ್ನಲ್ ನೀಡುವ ಮೂಲಕ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ.

ಗೃಹ ಇಲಾಖೆಗೆ ಜವಾಬ್ದಾರಿ ನೀಡಿ ನಿವೃತ್ತ ನ್ಯಾಯಮೂರ್ತಿ ಕುನ್ಹಾ ಅವರ ವರದಿ ಶಿಫಾರಸು ಅಳವಡಿಸಿಕೊಂಡು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಪಂದ್ಯ ನಡೆಯುವ ಸಂದರ್ಭ ಭದ್ರತೆ ಒದಗಿಸುವ ಬಗ್ಗೆ ಗೃಹ ಇಲಾಖೆಯೊಂದಿಗೆ ಕೆ.ಎಸ್.ಸಿ.ಎ. ಚರ್ಚೆಗೆ ಸೂಚನೆ ನೀಡಲಾಗಿದೆ. ಗೃಹ ಇಲಾಖೆ ಸೂಚಿಸುವ ನಿಬಂಧನೆಗಳನ್ನು ಅಳವಡಿಸಿಕೊಂದು ಪಂದ್ಯ ನಡೆಸಬಹುದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular