2025-26ನೇ ಸಾಲಿನಲ್ಲಿ ಬಿ.ಎಡ್.ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮದಡಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯು ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದವರಾಗಿರಬೇಕು. ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ಅಲ್ಪಸಂಖ್ಯಾತರ ಅಭ್ಯರ್ಥಿಗಳ ಪೋಷಕರ ವಾರ್ಷಿಕ ಗರಿಷ್ಠ ವರಮಾನ ರೂ.6 ಲಕ್ಷ ಮೀರಿರಬಾರದು. ಈ ಕೋರ್ಸ್‍ಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ ರೂ.25 ಸಾವಿರದಂತೆ (ಗರಿಷ್ಟ 2 ವರ್ಷ) ಅನುದಾನವನ್ನು ನೀಡಲಾಗುವುದು. ವಿದ್ಯಾರ್ಥಿಗಳನ್ನು ಅರ್ಹತಾ ಪರೀಕ್ಷೆ/ ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡತಕ್ಕದ್ದು.
ವಿದ್ಯಾರ್ಥಿಗಳು ಬಿ.ಎಡ್.ಕೋರ್ಸ್‍ನಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸಿರುವ ಬಗ್ಗೆ ಎಲ್ಲಾ ಅಧಿಕೃತ ದಾಖಲಾತಿಗಳನ್ನು ಸಲ್ಲಿಸತಕ್ಕದ್ದು. ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿನಿಂದ ಮಾನ್ಯತೆ ಪಡೆದಿರುವ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್. ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಹರಿರುತ್ತಾರೆ.
ಮೊದಲನೇ ವರ್ಷದಲ್ಲಿ ಪ್ರೋತ್ಸಾಹಧನ ಪಡೆದಿರುವ ಅಭ್ಯರ್ಥಿಗಳು ಎರಡನೇ ವರ್ಷಕ್ಕೆ ಪ್ರೋತ್ಸಾಹಧನ ಪಡೆಯಲು ಪ್ರತ್ಯೇಕ ಅರ್ಜಿ ಸಲ್ಲಿಸತಕ್ಕದ್ದು. ಪ್ರತಿ ಜಿಲ್ಲೆಗೆ ಬಿ.ಎಡ್. ಕೋರ್ಸಿನ ಅಭ್ಯರ್ಥಿಗಳಿಗೆ ಬಿಡುಗಡೆ ಮಾಡಿರುವ ಅನುದಾನದಲ್ಲಿ ಕನಿಷ್ಟ ಶೇ.50 ರಷ್ಟು ಬಾಲಕಿಯರಿಗೆ ಮೀಸಲಿರಿಸತಕ್ಕದ್ದು. ಎಲ್ಲಾ ಅರ್ಜಿಗಳನ್ನು ಕಡ್ಡಾಯವಾಗಿ ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಸ್ವೀಕರಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್, 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್‍ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಕೊಡಗು ಜಿಲ್ಲೆ 9972799091, ತಾಲ್ಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂ.ಸಂ.9900731037, ತಾಲ್ಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂ.ಸಂ.8548068519 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಆರ್.ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.
