BIG NEWS : 2026 ರ ಏಪ್ರಿಲ್ ನಲ್ಲಿ ಜಿ.ಪಂ, ತಾ.ಪಂ, ಗ್ರಾ.ಪಂ ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಧಾರ.!

ಬೆಂಗಳೂರು : 2026 ರ ಏಪ್ರಿಲ್ ನಲ್ಲಿ ಜಿ.ಪಂ, ತಾ.ಪಂ, ಗ್ರಾ.ಪಂ ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ವಿವಿಧ ಪುರ ಸಭೆ ಹಾಗೂ ನಗರಸಭೆ ಸೇರಿ 6500 ಕ್ಕೂ ಹೆಚ್ಚು ನಗರ ಮತ್ತ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನ 2026 ರ ಏಪ್ರಿಲ್ ನಲ್ಲಿ ನಡೆಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಕಳೆದ 4 ವರ್ಷಗಳಿಂದ ತಾಪಂ, ಜಿಪಂ ಯಾವುದೇ ಚುನಾವಣೆ ನಡೆದಿರಲಿಲ್ಲ. ಆದ್ದರಿಂದ 2026 ಏಪ್ರಿಲ್ ನಲ್ಲಿ ಚುನಾವಣೆ ನಡೆಸಲು ಸಚಿವ ಸಂಪುಟ ಸಭೆ ನಿರ್ಧರಿಸಿದ್ದು, ಇದಕ್ಕಾಗಿ ಅಗತ್ಯ ತಯಾರಿ ನಡೆಸಲು ನಿರ್ಧರಿಸಲಾಗಿದೆ.

300 ಕೋಟಿ ವೆಚ್ಚದಲ್ಲಿ ಪುರ್ನವಸತಿ ಕಲ್ಪಿಸಲು ಸರ್ಕಾರ ಸಿದ್ಧ

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ 1,382 ಕುಟುಂಬಗಳ ಸ್ಥಳಾಂತರಕ್ಕೆ 2005ರಲ್ಲಿ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೊಷಣೆ ಮಾಡಿತ್ತು. ವಾಸವಿದ್ದ ಕುಟುಂಬಗಳ ಪೈಕಿ 670 ಕುಟುಂಬಗಳು ಸ್ಥಳಾಂತರಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿಂದೆಯೇ 356 ಕುಟುಂಬಗಳಿಗೆ ₹142 ಕೋಟಿ ಪರಿಹಾರ ನೀಡಿ ಸ್ಥಳಾಂತರ ಮಾಡಲಾಗಿದೆ. ಪ್ರಸ್ತುತ ಬಾಕಿ ಉಳಿದ 314 ಕುಟುಂಬಗಳಿಗೆ ₹300 ಕೋಟಿ ವೆಚ್ಚದಲ್ಲಿ ಪುರ್ನವಸತಿ ಕಲ್ಪಿಸಲು ಸರ್ಕಾರ ಸಿದ್ಧವಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಹೊರಬರಲು ಇಚ್ಛಿಸಿದ ಕುಟುಂಬಗಳು ಮೊದಲು ತಹಶೀಲ್ದಾರ್ ಅಧ್ಯಕ್ಷತೆಯ ಸಮಿತಿಗೆ ಅರ್ಜಿ ಸಲ್ಲಿಸಬೇಕು. ಸಮಿತಿಯಲ್ಲಿ ಕಂದಾಯ, ಭೂದಾಖಲೆ, ತೋಟಗಾರಿಕೆ, ಅರಣ್ಯ, ಕೃಷಿ, ಲೋಕೋಪಯೋಗಿ ಸೇರಿದ ಅಧಿಕಾರಿಗಳು ಇದ್ದು, ಪುನರ್ವಸತಿಗೆ ಅರ್ಜಿ ಸಲ್ಲಿಸಿದ ಕುಟುಂಬ ವಾಸವಿದ್ದ ಮನೆ ಹಾಗೂ ಜಮೀನುಗಳ ಮೌಲ್ಯವನ್ನು ನಿರ್ಣಯಿಸಿ, ಜಿಲ್ಲಾಧಿಕಾರಿಗಳ ಸಮಿತಿಗೆ ಸಲ್ಲಿಸುತ್ತಾರೆ. ನಂತರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆ ಸಮಿತಿಯು ಪರಿಹಾರವನ್ನು ನಿಗದಿಪಡಿಸಿ ಹಣ ಬಿಡುಗಡೆಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ. ಇದನ್ನು ಆಧರಿಸಿ ಸರ್ಕಾರ 2025ರ ಪ್ರಸ್ತುತ ಲೋಕೋಪಯೋಗಿ ಹಾಗೂ ಕಂದಾಯ ಇಲಾಖೆ ಪ್ರಮಾಣಿತ ದರದಲ್ಲಿ ಪರಿಹಾರ ವಿತರಣೆಗೆ ಕ್ರಮಕೈಗೊಳ್ಳಲಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read