GOOD NEWS : ರಾಜ್ಯದ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಸರ್ಕಾರದಿಂದ ಮಾನ್ಯತೆ ಪಡೆದ ಕ್ರೀಡಾ ಸಂಸ್ಥೆಯಿಂದ ಸಂಘಟಿಸಲಾದ ರಾಷ್ಟ್ರ ಅಥವಾ ಅಂತರರಾಷ್ಟ್ರ ಮಟ್ಟದ ಪಂದ್ಯಾವಳಿಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಬೆಂಗಳೂರು ನಗರ ಜಿಲ್ಲೆಯ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2024-25 ನೇ ಸಾಲಿನ (ದಿನಾಂಕ: 01-04-2024 ರಿಂದ 31.03-2025 ) ಕ್ರೀಡಾ ಸಾಧನೆ ದಾಖಲಿಸಿದ ಅರ್ಹ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಬೆಂಗಳೂರು ನಗರ ಜಿಲ್ಲೆ , ಕೊಠಡಿ ಸಂ: 17-18, ಶ್ರೀ ಕಂಠೀರವ ಕ್ರೀಡಾ ಸಂಕಿರ್ಣ, ಕಸ್ತೂರಬಾ ರಸ್ತೆ, ಬೆಂಗಳೂರು ಇಲ್ಲಿ ಪಡೆದು ಭರ್ತಿ ಮಾಡಿ ಡಿಸೆಂಬರ್ 20 ರೊಳಗಾಗಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ: 22239771 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read