ಇಂದಿನಿಂದ ಖ್ಯಾತ ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭಾರತ ಪ್ರವಾಸ

ನವದೆಹಲಿ: ಖ್ಯಾತ ಫುಟ್ಬಾಲ್ ತಾರೆ ಅರ್ಜೇಂಟಿನಾದ ಲಿಯೋನೆಲ್ ಮೆಸ್ಸಿ ಇಂದಿನಿಂದ ಮೂರು ದಿನ ಭಾರತ ಪ್ರವಾಸ ಕೈಗೊಂಡಿದ್ದಾರೆ.

ಶುಕ್ರವಾರ ರಾತ್ರಿ ಭಾರತಕ್ಕೆ ಆಗಮಿಸಲಿದ್ದಾರೆ. ಮಧ್ಯರಾತ್ರಿ 1.30ರ ವೇಳೆಗೆ ಕೊಲ್ಕತ್ತಾಗೆ ಬಂದಿಳಿಯಲಿದ್ದು, ಡಿಸೆಂಬರ್ 15ರವರೆಗೂ ಭಾರತದಲ್ಲಿ ಇರುತ್ತಾರೆ. ಡಿ. 13ರಂದು ಶನಿವಾರ ಕೊಲ್ಕತ್ತಾದ ವಿಐಪಿ ರಸ್ತೆಯಲ್ಲಿ ನಿರ್ಮಾಣವಾದ ತಮ್ಮ 70 ಅಡಿಯ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ನಂತರ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ದಿಗ್ಗಜ ಟೆನಿಸ್ ಆಟಗಾರ ಲಿಯಾಂಡರ್ ಫೇಸ್ ಸೇರಿ ಇನ್ನು ಹಲವರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಟ ಶಾರುಖಾನ್ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.

ಸಂಜೆ ಹೈದರಾಬಾದ್ ಗೆ ತೆರಳಲಿರುವ ಲಿಯೋನೆಲ್ ಮೆಸ್ಸಿ ಸ್ನೇಹಾರ್ಥವಾಗಿ ಆಯೋಜಿಸಿರುವ ಫುಟ್ಬಾಲ್ ಪಂದ್ಯ ಆಡಲಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿ ಹಲವರು ಭಾಗವಹಿಸಲಿದ್ದಾರೆ.

ಡಿಸೆಂಬರ್ 14ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸ್ಟಾರ್ ಕ್ರಿಕೆಟಿಗರೊಂದಿಗೆ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಳ್ಳಲಿರುವ ಲಿಯೋನೆಲ್ ಮೆಸ್ಸಿ ಡಿ. 15ರಂದು ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಅದೇ ದಿನ ಅರ್ಜೆಂಟಿನಾಕ್ಕೆ ಹಿಂತಿರುಗಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read