HomeLatest NewsBIG NEWS : ಎಲ್ಲೆಂದರಲ್ಲಿ ವಾಹನ ನಿಲ್ಲಿಸ್ತೀರಾ ಹುಷಾರ್ : ಬೆಂಗಳೂರಲ್ಲಿ ಮತ್ತೆ 'ಟೋಯಿಂಗ್' ಆರಂಭ.!

BIG NEWS : ಎಲ್ಲೆಂದರಲ್ಲಿ ವಾಹನ ನಿಲ್ಲಿಸ್ತೀರಾ ಹುಷಾರ್ : ಬೆಂಗಳೂರಲ್ಲಿ ಮತ್ತೆ ‘ಟೋಯಿಂಗ್’ ಆರಂಭ.!

ಬೆಂಗಳೂರು : ಅವಸರದಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿ ಹೋಗ್ತೀರಾ…! ಬೇಗ ಬರ್ತೀನಿ ಅಂತ ಕಂಡ ಕಂಡಲ್ಲಿ ವಾಹನ ನಿಲ್ಲಿಸಿ ಹೋದರೆ..ವಾಪಸ್ ಬರುವಾಗ ನಿಮ್ಮ ಗಾಡಿ ಇರಲ್ಲ… ಹೌದು. ಎಲ್ಲೆಂದರಲ್ಲಿ ರಸ್ತೆ ಬದಿ ವಾಹನಗಳನ್ನು ನಿಲ್ಲಿಸುವವರಿಗೆ ಮತ್ತೆ ಶಾಕ್ ನೀಡಲಿದ್ದಾರೆ. ಬೆಂಗಳೂರಲ್ಲಿ ಮತ್ತೆ ವಾಹನಗಳ ಟೋಯಿಂಗ್ ಆರಂಭವಾಗಲಿದೆ.

ಹೌದು, ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಆರಂಭವಾಗಲಿದ್ದು, ಸಂಚಾರಿ ಪೊಲೀಸರ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಟೋಯಿಂಗ್ ಜವಾಬ್ದಾರಿ ವಹಿಸಿಕೊಂಡಿದೆ. ಈಗಾಗಲೇ ಒಂದು ಟೋಯಿಂಗ್ ವಾಹನ ಖರೀದಿಸಲಾಗಿದ್ದು, ಉಳಿದ 4 ವಾಹನ ಶೀಘ್ರವೇ ಬರಲಿದೆ.

ಎಲ್ಲೆಂದರಲ್ಲಿ ವಾಹನಗಳ ನಿಲುಗಡೆಗೆ ಕಡಿವಾಣ ಹಾಕಲು ಜಿಬಿಎ ಸಿದ್ದತೆ ಮಾಡಿಕೊಂಡಿದೆ.. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಗೆ ಕಾರಣವಾಗುವ ಅನಧಿಕೃತ ಪಾರ್ಕಿಂಗ್ಗಳನ್ನು ತಡೆಯಲು ಟೋಯಿಂಗ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲಾಗುತ್ತಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಸ್ತೆಗಳಲ್ಲಿಯೇ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿರುವುದರಿಂದ ಸಂಚಾರದಟ್ಟಣೆ ಮತ್ತಷ್ಟು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಸುಗಮ ಸಂಚಾರಕ್ಕಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕಕಡೆಗಳಲ್ಲಿ ಮುಖ್ಯರಸ್ತೆಗಳಲ್ಲಿಯೇ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಇದರಿಂದ ಜನರ ಓಡಾಟಕ್ಕೆ ಸಮಸ್ಯೆಯಾಗುತ್ತಿದೆ. ಇದನ್ನು ತಪ್ಪಿಸಲು ಟೋಯಿಂಗ್ ಕ್ರಮ ಮತ್ತೆ ಜಾರಿಯಾಗುತ್ತಿದೆ .

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular