BIG NEWS: SC ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು

ಬೆಳಗಾವಿ: ರಾಜ್ಯದಲ್ಲಿ ಉದ್ಯೋಗ ಮತ್ತು ಶಿಕ್ಷಣ ಇನ್ನಿತರ ವಿಚಾರಗಳಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಜಾರಿ ಮಾಡಲು ಹೊರಡಿಸಿದ್ದ ಐತಿಹಾಸಿಕ ಆದೇಶಕ್ಕೆ ಕಾನೂನು ಬಲ ನೀಡಲು ‘ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ವರ್ಗೀಕರಣ ವಿಧೇಯಕ -2025’ ಜಾರಿಗೆ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಪ್ರಸಕ್ತ ಅಧಿವೇಶನದಲ್ಲಿಯೇ ವಿಧೇಯಕ ಅಂಗೀಕರಿಸುವ ಮೂಲಕ ಎಸ್ಸಿ ಯ ಶೇಕಡ 17ರಷ್ಟು ಮೀಸಲಾತಿಯಲ್ಲಿ ಎಡಗೈ, ಬಲಗೈ, ಸ್ಪೃಶ್ಯ, ಸೂಕ್ಷ್ಮ ಜಾತಿಗಳಿಗೆ ಒಳ ಮೀಸಲು ಜಾರಿ ಮಾಡಲು ತೀರ್ಮಾನಿಸಲಾಗಿದೆ.

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಜಾರಿಗೊಳಿಸಿ ಕಳೆದ ಆಗಸ್ಟ್ 25ರಂದು ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಎದುರಾಗಿರುವ ಸವಾಲುಗಳನ್ನು ನಿರ್ವಹಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಪರಿಶಿಷ್ಟ ಜಾತಿಯ ಶೇಕಡ 17ರಷ್ಟು ಮೀಸಲು ಪ್ರಮಾಣವನ್ನು ಮೂರು ವರ್ಗೀಕರಣದ ಒಳ ಮೀಸಲು ನಿಗದಿ ಮಾಡಿರುವ ಈ ಪ್ರಕರಣವನ್ನು ಹೈಕೋರ್ಟ್ ಅಂತಿಮ ತೀರ್ಪಿನ ಒಳಪಟ್ಟು ಕಾಯ್ದೆ ಜಾರಿ ಮಾಡಲು ಸಂಪುಟ ಬಯಸಿತ್ತು. ಈ ಮಹತ್ವದ ವಿಧೇಯಕವನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಲಾಗುವುದು ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read