ಬಾಗಲಕೋಟೆ: ಮೊಬೈಲ್ ಬಳಸದಂತೆ ಹಾಸ್ಟೆಲ್ ಸಿಬ್ಬಂದಿ ಎಚ್ಚರಿಕೆ ನೀಡಿದಕ್ಕೆ ನಾಲ್ವರು ವಿದ್ಯಾರ್ಥಿನಿಯರು ಮೊರಾರ್ಜಿ ವಸತಿ ಶಾಲೆಯ ಹಾಸ್ಟೆಲ್ ನ್ನು ರಾತ್ರೋ ರಾತ್ರಿ ತೊರೆದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಹಾಸ್ಟೆಲ್ ನಲ್ಲಿ ಮೊಬೈಲ್ ಬಳಸಬೇಡಿ ಎಂದು ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ. ಇದರಿಂದ ನಾಲ್ವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯರು ರಾತ್ರಿ ಬೆಳಗಾಗುವಷ್ಟರಲ್ಲಿ ಹಾಸ್ತೆಲ್ ನ್ನೇ ಬಿಟ್ಟು ಹೋಗಿದ್ದಾರೆ. ಮೊರಾರ್ಜಿ ವಸತಿ ಶಾಲೆಯಲ್ಲಿ ನಾಲ್ವರು ವಿದ್ಯಾರ್ಥಿನಿತರು ನಾಪತ್ತೆಯಾದ ಬಗ್ಗೆ ಬಾಗಲಕೋಟೆ ಜಿಲ್ಲಾ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ವಿಜಯಪುರದಲ್ಲಿ ನಾಲ್ವರು ವಿದ್ಯಾರ್ಥಿಯರನ್ನು ಪತ್ತೆ ಮಾಡಿದ್ದಾರೆ. ಬಗಾಲಕೋಟೆಯಿಂದ ರಾತ್ರಿ ಹುನಗುಂದಕ್ಕೆ ಹೋಗಿದ್ದ ವಿದ್ಯಾರ್ಥಿನಿಯರು ಅಲ್ಲಿಂದ ವಿಜಯಪುರಕ್ಕೆ ತೆರಳಿದ್ದಾರೆ. ವಿದ್ಯಾರ್ಥಿನಿಯರು ನಾಪತ್ತೆಯಾದ ಬಗ್ಗೆ ಪೊಲೀಸರಿಗೆ ದೂರು ನೀಡಿದ ನಾಲ್ಕೇ ಗಂಟೆಗಳಲ್ಲಿ ಪತ್ತೆ ಮಾಡಲಾಗಿದೆ. ಮಧ್ಯರಾತ್ರಿ 12:30ರ ಸುಮಾರಿಗೆ ವಿದ್ಯಾರ್ಥಿನಿಯರನ್ನು ವಿಜಯಪುರದಲ್ಲಿ ರಕ್ಷಿಸಲಾಗಿದೆ.
