BIG NEWS: ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲು ಆಗುತ್ತಾ? ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ಬೆಳಗಾವಿ: ಬೆಳಗಾವಿಯಲ್ಲಿ ಡಿನ್ನರ್ ಮೀಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟವನ್ನು ಬೇಡ ಎನ್ನಲು ಆಗುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ.

ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ, ಏನೂ ಅಲ್ಲ ಎಂದು ಹೇಳಿದರು.

ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನ ಮನೆಯಿಂದ ಇವತ್ತು ಮುದ್ದೆ, ಉಪ್ಸಾರು ಊಟ ಮಾಡಿ ಕಳಿಸುತ್ತೇವೆ ಎನ್ನುತ್ತಿದ್ದಾನೆ. ಹೀಗೇ ಅವರು ಪ್ರೀತಿಯಿಂದ ಹೇಳಿದಾಗ, ಕರೆದಾಗ ಬೇಡ ಎನ್ನಲು ಆಗುತ್ತದೆಯೇ? ನಾಳಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಅವರು ಊಟಕ್ಕೆ ಕರೆದಿದ್ದಾರೆ ಎಂದರು.

ದೊಡ್ಡಣ್ಣನವರ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರು. ನನ್ನ ಸ್ನೇಹಿತರೂ ಹೌದು. ಅವರದು ದೊಡ್ಡ ಕುಟುಂಬ. ಕಳೆದ 15 ವರ್ಷಗಳಿಂದ ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು. ನಮ್ಮ ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುತ್ತದೆಯೇ? ಹೀಗಾಗಿ ನಾನೂ ಸೇರಿದಂತೆ ಒಂದಷ್ಟು ಜನರು ಊಟಕ್ಕೆ ಹೋಗಿದ್ದೆವು, ಅಷ್ಟೇ. ಅದರಲ್ಲಿ ಯಾವ ಔತಣಕೂಟವು ಇಲ್ಲ, ಏನೂ ಇಲ್ಲ ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read